ಹೊಸಪೇಟೆ :
ಕರ್ನಾಟಕ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಗೆ ಬಳ್ಳಾರಿ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಪಿ.ವೆಂಕಟೇಶಲು ಅವರನ್ನು ರಾಜ್ಯಾಧ್ಯಕ್ಷ ಡಾ.ಶಾಂತವೀರ ನಾಯ್ಕ್ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಕಾಂಗ್ರೆಸ್ ಪಕ್ಷದ ತತ್ವ, ಸಿದ್ದಾಂತ, ಶಿಸ್ತಿಗೆ ಒಳಪಟ್ಟು, ಪಕ್ಷದಲ್ಲಿ ಅಸಂಘಟಿತ ಕಾರ್ಮಿಕರನ್ನು ಒಗ್ಗೂಡಿಸಿ ಅವರನ್ನು ಸದಸ್ಯರನ್ನಾಗಿ ಮಾಡುವ ಮೂಲಕ ಅವರ ಕಲ್ಯಾಣಕ್ಕಾಗಿ ಶ್ರಮಿಸಬೇಕೆಂದು ತಿಳಿಸಿದ್ದಾರೆ.
ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷ ವಿ.ಸೋಮಪ್ಪ ಅವರು ಜಿಲ್ಲಾ ಉಪಾಧ್ಯಕ್ಷ ಪಿ.ವೆಂಕಟೇಶಲು ಅವರಿಗೆ ನೇಮಕಾತಿ ಪತ್ರ ನೀಡಿದರು.ಈ ಸಂಧರ್ಭದಲ್ಲಿ ಮುಖಂಡರಾದ ಗುಜ್ಜಲ ನಾಗರಾಜ, ಆರ್.ಕೊಟ್ರೇಶ್, ಟಿ.ಹನುಮಂತಪ್ಪ ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ