ತುಮಕೂರು
ತುಮಕೂರು ಮಹಾನಗರ ಪಾಲಿಕೆ ಆಯುಕ್ತರಾದ ಐ.ಎ.ಎಸ್. ಅಧಿಕಾರಿ ಟಿ.ಭೂಪಾಲನ್ ಅವರಿಗೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ರಾಜ್ಯ ಮಟ್ಟದ ಪ್ರಶಸ್ತಿಯನ್ನು ಘೋಷಿಸಿದೆ.
ಕರ್ನಾಟಕ ರಾಜ್ಯ ಲೋಕಸಭಾ ಸಾರ್ವತ್ರಿಕ ಚುನಾವಣೆ 2019/ ವಿಧಾನಸಭೆ ಉಪಚುನಾಣೆ-2019 ರ ಪ್ರಕ್ರಿಯೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿರುವುದಕ್ಕಾಗಿ ರಾಜ್ಯ ಮಟ್ಟದ ಪ್ರಶಸ್ತಿಗೆ ತಮ್ಮನ್ನು ಆಯ್ಕೆ ಮಾಡಲಾಗಿರುತ್ತದೆಂದು ಜಂಟಿ ಮುಖ್ಯ ಚುನಾವಣಾಧಿಕಾರಿ ಎಚ್.ಜ್ಞಾನೇಶ್ ಅವರು ಆಯುಕ್ತರಿಗೆ ಜ.21 ರಂದು ಬರೆದಿರುವ ಆಮಂತ್ರಣ ಪತ್ರದಲ್ಲಿ ತಿಳಿಸಿದ್ದಾರೆ.
ಜ.25 ರಂದು ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ರಾಜ್ಯ ಮಟ್ಟದ ರಾಷ್ಟ್ರೀಯ ಮತದಾನ ದಿನಾಚರಣೆ ಏರ್ಪಟ್ಟಿದ್ದು, ಅಲ್ಲಿ ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸುವರೆಂದು ಪತ್ರದಲ್ಲಿ ತಿಳಿಸಲಾಗಿದೆ.
ಪಾಲಿಕೆ ಆಯುಕ್ತರಾಗಿದ್ದ ಭೂಪಾಲನ್ ಅವರನ್ನು ಹಠಾತ್ತನೆ ಬೆಳಗಾವಿಯ ವಿಶೇಷ ಜಿಲ್ಲಾಧಿಕಾರಿಗಳನ್ನಾಗಿ ಸರ್ಕಾರ ವರ್ಗಾಯಿಸಿತ್ತು. ಅದೇ ಹೊತ್ತಿಗೆ ಗೋಕಾಕ್ ಉಪಚುನಾವಣೆ ಬಂದಿದ್ದರಿಂದ, ಇವರನ್ನು ಅಲ್ಲಿನ ಚುನಾವಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಇವರು ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿದ ರೀತಿಯನ್ನು ಗಮನಿಸಿ, ಚುನಾವಣಾ ಆಯೋಗವು ಇವರನ್ನು ಸದರಿ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ