ತುರುವೇಕೆರೆ:
ಜಿಲ್ಲೆಯಲ್ಲಿಯೇ ತುರುವೇಕೆರೆ ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ಮೇ 20 ರಂದು ನೆಡೆಯುವ ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿಯ 14 ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಎಂದು ಶಾಸಕ ಮಸಾಲ ಜಯರಾಮ್ ಕೋರಿದರು.
ತಾಲೂಕಿನ ಸೂಳೇಕೆರೆ ವೀರಭದ್ರೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ತಾಲೂಕು ಬಿಜೆಪಿ ಘಟಕದ ವತಿಯಿಂದ ಅಭ್ಯರ್ಥಿಗಳಿಗೆ ಹಮ್ಮಿಕೊಂಡಿದ್ದ ಪಟ್ಟಣ ಪಂಚಾಯಿತಿ ಚುನಾವಣಾ ಸಿದ್ದತಾ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದದರು.
ಜನರಿಂದ ಆಯ್ಕೆಯಾದ ಜನಪ್ರತಿನಿದಿಗಳು ಪ್ರತಿಯಾಗಿ ಅವರ ಋಣ ತೀರಿಸುವ ಕೆಲಸ ಮಾಡಬೇಕು. ಪಟ್ಟಣದಲ್ಲಿ ನೆನೆಗುದಿಗೆ ಬಿದ್ದಿದ್ದ ವಾಣಿಜ್ಯ ಸಂಕೀರ್ಣ ಕಟ್ಟಡ 1.90 ಕೋಟಿ ವೆಚ್ಚದ ಇನ್ನು ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಯುಜಿಡಿ ವ್ಯವಸ್ಥೆಯ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ ಶೀಘ್ರದಲ್ಲೇ ಜನರ ಸೇವೆಗೆ ಅನುವು ಮಾಡಿಕೊಡಲಾಗುವುದು. ಕೆಲವೇ ದಿನಗಳಲ್ಲಿ ಪಟ್ಟಣದಲ್ಲಿ ಅಕ್ರಮ, ದರೋಡೆ, ಅಪರಾಧಗಳನ್ನು ತಡೆಯಲು ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಸಿಸಿಕ್ಯಾಮರ ಅಳವಡಿಸಲಾಗುವುದು.
ಅಲ್ಲದೆ ವಸತಿ, ಒಳಚರಂಡಿ, ವಿದ್ಯುತ್ ದೀಪ ಸೇರಿದಂತೆ ಪಟ್ಟಣದ ಇನ್ನಿತರ ಮೂಲಭೂತ ಸೌಕರ್ಯಗಳು ಕಲ್ಪಿಸುವ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆ ಕೆರಯನ್ನು ಮುಂದಿನ ದಿನಗಳಲ್ಲಿ ಪ್ರವಾಸಿ ತಾಣವಾಗಿ ಮಾಡಲಾಗುವುದು. ಅಲ್ಲದೆ ಹೀಗಾಗಲೇ ಇಲ್ಲಿನ ಪಟ್ಟಣ ಪಂಚಾಯಿತಿಯನ್ನು ಹೈಟೆಕ್ ಪುರಸಭೆಯಾಗಿ ಮಾರ್ಪಡಿಸಲಾಗುವುದು. ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಾಗರನಹಳ್ಳಿ ವಿಜಯಕುಮಾರ್ ಮಾತನಾಡಿ ಮೇ 23 ಪಲಿತಾಂಶದ ನಂತರ ನರೇಂದ್ರಮೋದಿ ದೇಶದಲ್ಲಿ ಮತ್ತೆ ಪ್ರಧಾನಿಯಾಗುವುದು ಅಷ್ಟೇ ಸತ್ಯವೋ, ಬಿ.ಎಸ್.ಯಡಿಯೂರಪ್ಪ ರಾಜ್ಯದಲ್ಲಿ ಮುಖ್ಯ ಮಂತ್ರಿಯಾಗುವುದು ಅಷ್ಟೆ ಸತ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಸದ್ಯಸ್ಯರಾಗಿ ಆಯ್ಕೆಯಾಗಿ ಶಾಸಕ ಮಸಾಲಜಯರಾಮ್ ಸೇರಿ ಪಟ್ಟಣ ಅಭಿವೃದ್ದಿ ಮಾಡಿ ಎಂದು ಸಲಹೆ ನೀಡಿದರು.
ಈ ಸಂದರ್ಬದಲ್ಲಿ ಪ.ಪಂ.ಗೆ ಬಿಜೆಪಿಯಿಂದ ಸ್ಪರ್ಧಿಸಿರುವ 14 ಮಂದಿ ಅಭ್ಯರ್ಥಿಗಳನ್ನು ವೇದಿಕೆಯಲ್ಲಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ದುಂಡಾರೇಣುಕಪ್ಪ, ಮುಖಂಡರುಗಳಾದ ಅರಳೀಕೆರೆಶಿವಯ್ಯ, ವಿ.ಬಿ.ಸುರೇಶ್, ಸೋಮೇನಹಳ್ಳಿಜಗದೀಶ್, ಬಸವರಾಜು, ಹೆಚ್.ಆರ್. ರಾಮೇಗೌಡ, ಮಾಚೇನಹಳ್ಳಿ ರಾಮಣ್ಣ ಬಸವರಾಜು, ವಿಶ್ವನಾಥ್ ಸೇರಿದಂತೆ ಹಲವು ಮುಖಂಡರು ಮತ್ತು ಕಾರ್ಯಕರ್ತರುಗಳು ಭಾಗವಹಿಸಿದ್ದರು.