ಡಿ.16ರಂದು ಎಲೆಕ್ಟ್ರಿಕಲ್ ಕನ್ಸೂಮರ್ ಫೆಡರೇಷನ್ ಉದ್ಘಾಟನೆ

ದಾವಣಗೆರೆ:

         ನಗರದ ರೋಟರಿ ಬಾಲಭವನದಲ್ಲಿ ಡಿ.16ರಂದು ಸಂಜೆ 6 ಗಂಟೆಗೆ ರಾಜ್ಯ ಎಲೆಕ್ಟ್ರಿಕಲ್ ಕನ್ಸೂಮರ್ ವೆಲ್‍ಫೇರ್ ಫೆಡರೇಷನ್ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ ಎಂದು ಫೆಡರೇಷನ್ ರಾಜ್ಯಾಧ್ಯಕ್ಷ ಸುಭಾನ್ ಖಾನ್ ತಿಳಿಸಿದರು.

        ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀಪ್ರಭುಲಿಂಗ ಸ್ವಾಮೀಜಿ, ಶ್ರೀಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀಗಜದಂಡ ಸ್ವಾಮೀಜಿ ವಹಿಸುವರು. ಮುಖ್ಯ ಅತಿಥಿಗಳಾಗಿ ಕಾರ್ಮಿಕ ಮುಖಂಡ ಹೆಚ್.ಕೆ.ರಾಮಚಂದ್ರಪ್ಪ, ಬಿ.ಗುರುಮೂರ್ತಿ, ಎನ್.ವೀರಭದ್ರಪ್ಪ, ನಾಗರಾಜ ಸ್ವಾಮಿ ಭಾಗವಹಿಸುವರು ಎಂದರು.
ವಿದ್ಯುತ್ ಬಳಕೆದಾರರು, ಗ್ರಾಹಕರ ಹಿತ ಕಾಯುವ ಸಲುವಾಗಿ ಸಂಸ್ಥೆಯನ್ನು ಅಸ್ತಿತ್ವಕ್ಕೆ ತರಲಾಗಿದೆ.

         ಗ್ರಾಹಕರಿಗೆ ಅನುಕೂಲವಾಗುವಂತೆ ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಹಾವೇರಿ ಮತ್ತು ಬಳ್ಳಾರಿ ಜಿಲ್ಲೆಗಳನ್ನು ಒಳಗೊಂಡಂತೆ ಪ್ರತ್ಯೇಕ ದಾವಣಗೆರೆ ವಿದ್ಯುತ್ ಸರಬರಾಜು ಕಂಪನಿಯನ್ನು ಸ್ಥಾಪಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಮಾಹಿತಿ ನೀಡಿದರು.ಸುದ್ದಿಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ಎನ್.ಎಸ್.ವೀರಭದ್ರಪ್ಪ, ಉಪಾಧ್ಯಕ್ಷ ಮಲ್ಲಿಕಾರ್ಜುನ, ಟಿಕೇಶ್ವರ, ಶಿವಯೋಗಿ ದಂಡಪ್ಪಳ, ಮೊಹಮ್ಮದ್ ಜಬೀ, ಪರ್ವೇಜ್ ಮತ್ತಿತರರು ಹಾಜರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link