ಶಿಕ್ಷಣದಲ್ಲಿನ ತಾರತಮ್ಯ ನಿವಾರಣೆಗೆ ಅಗತ್ಯ ಕ್ರಮಕ್ಕೆ ಆಗ್ರಹ

ಬೆಂಗಳೂರು

         ಶಿಕ್ಷಣದಲ್ಲಿನ ತಾರತಮ್ಯ ನಿವಾರಣೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ. ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಮಟ್ಟದ ಕನ್ನಡ ಸಾಹಿತ್ಯ ಸಂಸ್ಕತಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಎಂಬುದು ವ್ಯಾಪಾರಿಕರಣವಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು.

        ಬ್ಯಾಂಕಿಂಗ್ ಮತ್ತು ರೈಲ್ವೆ ಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪ್ರಾದೇಶಿಕ ಭಾಷೆಗಳಲ್ಲೂ ನಡೆಸಬೇಕು ಎಂದು ಅವರು ಒತ್ತಾಯಿಸಿದರು.ಒಂದರಿಂದ 10 ನೇ ತರಗತಿ ವರೆಗೆ ಕನ್ನಡವನ್ನು ಕಡ್ಡಾಯ ಮಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಎಸ್.ಜಿ. ಸಿದ್ದರಾಮಯ್ಯ ಹೇಳಿದರು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

Recent Articles

spot_img

Related Stories

Share via
Copy link