ವರ್ಗಾವಣೆಗಾಗಿ ಎಸ್ ಆರ್ ವಿಶ್ವನಾಥ್ ಅವರ ಸಹಿ ನಕಲು ಮಾಡಿದ ಜಿ.ಪಂ ನೌಕರ..!

ಬೆಂಗಳೂರು:

    ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಹಾಗು ಶಾಸಕ ಎಸ್.ಆರ್.ವಿಶ್ವನಾಥ್ ಸಹಿಯನ್ನು ನಕಲು ಮಾಡಿದ ಘಟನೆ ವರದಿಯಾಗಿದೆ .

   ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ನ ಸಹಾಯಕ ಕಾರ್ಯದರ್ಶಿಯಾಗಿರುವ ಬಿ.ಕೆ.ಚಂದ್ರಕಾಂತ್ ಸಿಕ್ಕಿಬಿದ್ದಿರುವ ಅಧಿಕಾರಿ. ಚಂದ್ರಕಾಂತ್ ತಮ್ಮ ವರ್ಗಾವಣೆ ವಿಚಾರವಾಗಿ ಈ ರೀತಿ ಮಾಡಿದ್ದಾರೆ. ಸೆಪ್ಟಂಬರ್ 8ರಂದು ಎಸ್.ಆರ್.ವಿಶ್ವನಾಥ್ ಅವರ ಹೆಸರಿನ ಲೆಟರ್ ಹೆಡ್ ಬಳಸಿ ಶಿಫಾರಸು ಪತ್ರವನ್ನು ಚಂದ್ರಕಾಂತ್ ಬಳಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

     ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾ ಅಧಿಕಾರಿ ವಿಠಲ್ ಕಾವಳೆ ಜಾಗಕ್ಕೆ ತಮ್ಮನ್ನು ವರ್ಗಾಯಿಸುವಂತೆ ಚಂದ್ರಕಾಂತ್ ಮನವಿ ಮಾಡಿದ್ದರು. ನಕಲಿ ಶಿಫಾರಸು ಪತ್ರಕ್ಕೆ ಸಹಿ ಮಾಡಿ ಸಿಎಂ ಕೂಡ ವರ್ಗಾವಣೆ ಆದೇಶ ಹೊರಡಿಸಿದ್ದರು. ಇದೀಗ ಫೋರ್ಜರಿ ಪ್ರಕರಣ ಬಯಲಾಗಿದ್ದು, ಆರೋಪಿ ಚಂದ್ರಕಾಂತ್ ವಿರುದ್ಧ ಪೊಲೀಸ್ ದೂರು ಕೊಡಲು ಎಸ್.ಆರ್.ವಿಶ್ವನಾಥ್ ಮುಂದಾಗಿದ್ದಾರೆ

ಚಂದ್ರಕಾಂತ್ ಬಿ.ಕೆ. ಸಹಾಯಕ ಕಾರ್ಯದರ್ಶಿಯಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

     ಅವರು ನನಗೆ ಪರಿಚಿತರಾಗಿದ್ದು. ಇವರು ವಯೋವೃದ್ಧ ತಂದೆ-ತಾಯಿಯ ಆರೋಗ್ಯದ ಕಡೆ ಗಮನಿಸಬೇಕಾದ ಕಾರಣ ಅವರನ್ನು ಬೆಂಗಳೂರು ನಗರ ಜಿಲ್ಲಾ ಪಂಚಾಯತಿಯಲ್ಲಿ ಸಹಾಯಕ ಯೋಜನಾ ಅಧಿಕಾರಿ-1 ಆಗಿ ಕಾರ್ಯನಿರ್ವಹಿಸುತ್ತಿರವ ವಿಠಲ್ ಕಾವಳೆ ಜಾಗಕ್ಕೆ ತಮ್ಮನ್ನು ವರ್ಗಾಯಿಸುವಂತೆ ಸೂಕ್ತ ಆದೇಶ ನೀಡಬೇಕು ಎಂದು ಕೋರುತ್ತೇನೆ.

    ಪತ್ರದ ಕೆಳಗೆ ತಮ್ಮ ವಿಶ್ವಾಸಿ ಎಸ್.ಆರ್.ವಿಶ್ವನಾಥ್ ಎಂದು ಬರೆದು ಅವರ ಸಹಿಯನ್ನು ಫೋರ್ಜರಿ ಮಾಡಿದ್ದಾರೆ. ಈ ಪತ್ರವನ್ನು ಚಂದ್ರಕಾಂತ್ ಬಿ.ಕೆ. ಸೆಪ್ಟೆಂಬರ್ 18ರಂದು ಸಿಎಂ ಯಡಿಯೂರಪ್ಪ ಅವರಿಗೆ ನೀಡಿದ್ದರು. ಇದಕ್ಕೆ ಸಿಎಂ ಅಕ್ಟೋಬರ್ 9ರಂದು ಸಹಿ ಮಾಡಿದ್ದರು.

     ತಮ್ಮ ಕಚೇರಿಯಿಂದ ಲೆಟರ್ ಹೆಡ್ ಕಳ್ಳತನವಾಗಿರುದನ್ನು ಕಂಡ ವಿಶ್ವನಾಥ್ ಅಲ್ಲಿದ್ದ ಅಧಿಕಾರಿಗಳ ಮೇಲೆ ಕೂಗಾಡಿದ್ದಾರೆ, ನನಗೆ ಗೊತ್ತಿಲ್ಲದೇ ನನ್ನ ಲೆಟರ್ ಹೆಡ್ ಕದ್ದು ನನ್ನ ಸಹಿ ಫೋರ್ಜರಿ ಮಾಡಿದ್ದಾರೆ ಇನ್ನೂ ಸಿಎಂ ಸಹಿಯನ್ನು ನಕಲಿ ಮಾಡುವುದಿಲ್ಲ ಎಂಬುದನ್ನು ಹೇಗೆ ನಂಬುವುದು ಎಂದು ಪ್ರಶ್ನಿಸಿದ್ದಾರೆ, ಇನ್ನೂ ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link