ಬೆಂಗಳೂರು
ಹಿಂದಿನಿಂದ ಬಂದ ಟಾಟಾ ಸುಮೋ ಡಿಕ್ಕಿ ಹೊಡೆದು ಬೈಕ್‍ನಲ್ಲಿ ಹೋಗುತ್ತಿದ್ದ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ಹೆಚ್‍ಎಎಲ್ ವಿಮಾನನಿಲ್ದಾಣ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮಾರತ್‍ಹಳ್ಳಿಯ ಹೊರವರ್ತುಲ ರಸ್ತೆಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಮೃತಪಟ್ಟವರನ್ನುತಮಿಳುನಾಡಿನ ಈರೋಡ್ ಮೂಲದ ಮುನ್ನೆಕೊಳಲುವಿನಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸಿಸುತ್ತಿದ್ದ ಅಬ್ದುಲ್ ರಹೀಮ್ (27)ಎಂದು ಗುರುತಿಸಲಾಗಿದೆ.
ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಹೀಂ ರಾತ್ರಿ 8ರ ವೇಳೆ ಕೆಲಸ ಮುಗಿಸಿಕೊಂಡು ಮುನ್ನೆಕೊಳಲುವಿನ ಮನೆಗೆ ಬೈಕ್‍ನಲ್ಲಿ ವರ್ತುಲ ರಸ್ತೆಯ ನ್ಯೂಆರಿಜನ್ ಕಾಲೇಜು ಬಳಿ ಹೋಗುತ್ತಿದ್ದರು.
ಈ ವೇಳೆ ಹಿಂದಿನಿಂದ ಬಂದ ಟಾಟಾ ಸುಮೋ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ರಹೀಂನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿರುವ ಹೆಚ್.ಎ.ಎಲ್ ಸಂಚಾರ ಪೆಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
