ಬೆಂಗಳೂರು:
ಸದ್ಯ ಘೋಷಣೆಯಾಗಿರುವ ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜಕೀಯ ಪಕ್ಷಗಳು ತಮ್ಮ ಕಸರತ್ತು ಮುಂದುವರೆಸಿವೆ ಅವದರ ಭಾಗವಾಗಿ ಕೆಪಿಸಿಸಿ ಕಛೇರಿಯಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಡಿ ಕೆ ಶಿವಕುಮಾರ್ ಯಾರು ಹೊಸಬರು ಹಳಬರು ಎಂದಿಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿಕೊಂಡು ಬರುವ ಕೆಲಸ ಮಾಡಬೇಕು ಎಂದರು.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಶಿರಾ ಕ್ಷೇತ್ರದ ಕಡೆಗೆ ಎಲ್ಲರ ಗಮನ ಇದೆ. ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಯೋಗ್ಯತೆ ಅನುಸಾರವಾಗಿ ಟಿಕೆಟ್ ನೀಡುವ ತೀರ್ಮಾನವನ್ನು ಕೆಪಿಸಿಸಿ ಯೇ ಮಾಡಲಿದೆ ಎಂದರು. ಇನ್ನು ಅನೇಕ ಜನರು ಕಾಂಗ್ರೆಸ್ ಸಿದ್ದಾಂತ ಒಪ್ಪಿ ಬರಲು ಆಸಕ್ತಿ ತೋರುತ್ತಿದ್ದಾರೆ. ನಮ್ಮ ಸಿದ್ದಾಂತ ಒಪ್ಪಿ ಬರುವವರನ್ನು ಸಮಿತಿ ಮೂಲಕ ಪರಿಶೀಲಿಸಿ ಸೇರಿಸಿಕೊಳ್ಳಲು ಕ್ರಮ ಕೈಗೊಳಲಾಗುವುದು ಎಂದು ಡಿಕೆಶಿ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
