ಪ್ರತಿ ಮಗು ಶಿಕ್ಷಣ ಪಡೆಯುವುದು ಅತ್ಯವಶ್ಯಕ : ಎಸ್.ಬಿ.ಹಂದ್ರಾಳ

ಬಳ್ಳಾರಿ 

          ಬಾಲ್ಯ ಹಾಗೂ ಕಿಶೋರಾವಸ್ಥೆ ಕಾರ್ಮಿಕ ಪದ್ದತಿಯು ಅನಿಷ್ಠ ಪದ್ದತಿಯಾಗಿದ್ದು, ಇದರ ನಿರ್ಮೂಲನೆಗೆ ಪ್ರತಿ ಮಗು ಶಿಕ್ಷಣ ಪಡೆಯುವುದು ಅತ್ಯವಶ್ಯಕವೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಬಿ.ಹಂದ್ರಾಳ ಅವರು ಹೇಳಿದರು.

          ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆ ಮತ್ತು ಕಾರ್ಮಿಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಬಾಲ್ಯಾವಸ್ಥೆ ಹಾಗೂ ಕಿಶೋರಾವ್ಯಸ್ಥೆ ಕಾರ್ಮಿಕ ಪದ್ದತಿ ನಿರ್ಮೂಲನೆಯ ಬಗ್ಗೆ ಬೀದಿ ನಾಟಕದ ಮೂಲಕ ಜಾಗೃತಿ ಕಾರ್ಯಕ್ರಮ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.

          ಬಾಲಕಾರ್ಮಿಕ ಪದ್ಧತಿಗಳಿಂದ ಸಮಾಜದ ಮೇಲೆ ಭೀಕರ ಪರಿಣಾಮ ಬೀಳುತ್ತದೆ. ಶಿಕ್ಷಣ ಪಡೆಯುವುದರ ಮೂಲಕವಾಗಿ ಈ ಪದ್ದತಿಯನ್ನು ನಿರ್ಮೂಲನೆಗೊಳಿಸಬಹುದೆಂದು ಹೇಳಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಬಿ.ಹಂದ್ರಾಳ ಅವರು ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಾರ್ವಜನಿಕರಿಗೆ ಉಚಿತವಾದ ಕಾನೂನು ಅರಿವು ಮತ್ತು ನೆರೆವು ನೀಡಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

            ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ್.ಎಂ ಅವರು ಮಾತನಾಡಿ, ಬಾಲ್ಯಾವಸ್ಥೆ ಹಾಗೂ ಕಿಶೋರಾವ್ಯಸ್ಥೆ ಕಾರ್ಮಿಕ ಕಾಯ್ದೆ 1986 ರನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 6 ರಿಂದ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂದರು.

             ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸಂಡೂರು ಮತ್ತು ಕೂಡ್ಲಿಗಿ ತಾಲೂಕಿನಾದ್ಯಾಂತ 24 ಬೀದಿ ನಾಟಕದ ಪ್ರದರ್ಶನದ ಮೂಲಕ ಬಾಲ್ಯಾವಸ್ಥೆ ಹಾಗೂ ಕಿಶೋರಾವ್ಯಸ್ಥೆ ಕಾರ್ಮಿಕ ಪದ್ದತಿ ನಿರ್ಮೂಲನೆಗಾಗಿ ಜನರಲ್ಲಿ ಜಾಗೃತಿ ಮೂಡಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆ ಕ್ಷೇತ್ರಾಧಿಕಾರಿ ಪಿ.ಎಂ ಈಶ್ವರಯ್ಯ ಅವರು ನಿರೂಪಿಸಿದರು.

            ಈ ಸಂದರ್ಭದಲ್ಲಿ ತಹಶೀಲ್ದಾರರಾದ ವಿಶ್ವಜೀತ್ ಮೆಹತಾ, ಕಾರ್ಮಿಕ ಅಧಿಕಾರಿ ಚಂದ್ರಶೇಖರ ಐಲಿ, ಮಕ್ಕಳ ಹಕ್ಕುಗಳ ರಕ್ಷಣಾ ನಿಗಾ ಕೇಂದ್ರದ ಸದಸ್ಯ ಹೆಚ್.ಸಿ. ರಾಘವೇಂದ್ರ, ಕಾರ್ಮಿಕ ನಿರೀಕ್ಷಕ ರವಿದಾಸ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಮನ್ವಯಾಧಿಕಾರಿ ದುರ್ಗೇಶ್ ಮಾಚನೂರ್ ಸೇರಿದಂತೆ ಚೈಲ್ಡ್ ಲೈನ್ ಸಹಯೋಗ ಸಂಸ್ಥೆಯ ಅಧಿಕಾರಿಗಳು ಇತರರು ಇದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link