ನಾಡಿನ ಎಲ್ಲರೂ ಮಾತೃ ಭಾಷೆಗೆ ಆದ್ಯತೆ ನೀಡಲು ಕರೆ

ಹುಳಿಯಾರು

         ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದ್ದು ಕನ್ನಡ ಸಾಹಿತ್ಯ ತನ್ನದೇ ಆದ ಸತ್ವ ಹೊಂದಿದೆ. ನಾಡಿನ ಎಲ್ಲರೂ ಮಾತೃ ಭಾಷೆಗೆ ಆದ್ಯತೆ ನೀಡಬೇಕು ಎಂದು ಕವಿ ಹಾಗೂ ಪ್ರಾಂಶುಪಾಲ ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ ತಿಳಿಸಿದರು.

          ಹುಳಿಯಾರಿನ ಸ್ವಾಮಿ ವಿವೇಕಾನಂದ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಕಿಡ್‍ಝಿ ವಿವೇಕಾನಂದ ಇಂಟರ್ ನ್ಯಾಷನಲ್ ಸ್ಕೂಲಿನಿಂದ ಸಮೀಪದ ಕೋಡಿಪಾಳ್ಯದ ಧ್ಯಾನನಗರಿಯಲ್ಲಿನ ಶ್ರೀ ಧ್ಯಾನ ನಗರಿಯ ಸೇವಾಲಾಲ್ ಸಾಂಸ್ಕೃತಿಕ ಸದನದಲ್ಲಿ ಆಯೋಜಿಸಲಾಗಿದ್ದ ಕನ್ನಡ ಕಲಾ ವೈಭವ 2018 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

         ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಹೇಗೆ ಕಾಪಾಡಿಕೊಳ್ಳಬೇಕೆಂದು ಎಂಬ ಬಗ್ಗೆ ಮಾತನಾಡಿದ ಅವರು, ಕನ್ನಡ ನಾಡಿನ ಪರಂಪರೆ ಉಳಿಸಿ ಬೆಳೆಸುವುದು ಎಲ್ಲರ ಹೊಣೆಯಾಗಿದ್ದು ಈ ಕಾರ್ಯಕ್ರಮ ಶಾಲಾ ಹಂತದಿಂದ, ಮನೆ ಮನೆಯಿಂದ ಆಗಬೇಕು ಎಂದರು.

        ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಶಶಿಭೂಷಣ್ ಮಾತನಾಡಿ ಪೋಷಕರು ತಮ್ಮ ಮಕ್ಕಳೊಂದಿಗೆ ಹೆಚ್ಚಿನ ಸಮಯವನ್ನು ಕಳೆಯಬೇಕೆಂದು ತಿಳಿಸಿದರು.

         ವಿವೇಕಾನಂದ ಸಂಸ್ಥೆಯ ಗೌರವಾಧ್ಯಕ್ಷ ಜಿ.ಎಸ್.ಚಂದ್ರಶೇಖರಯ್ಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಅಮರ್‍ನಾಥ್, ಸಮಾಜಸೇವಕರಾದ ಆರ್.ಮಂಜುನಾಥ್, ವಿವೇಕಾನಂದ ಸಂಸ್ಥೆಯ ಅಧ್ಯಕ್ಷ ಅಶೋಕ್ ಮೂರ್ತಿ, ಕಾರ್ಯದರ್ಶಿ ಅಶೋಕ್ ಚಂದ್ರ, ವಿವೇಕಾನಂದ ಇಂಟರ್ ನ್ಯಾಷನಲ್ ಸ್ಕೂಲಿನ ಪ್ರಾಂಶುಪಾಲೆ ಲಕ್ಷ್ಮಿ ಸೇರಿದಂತೆ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.

           ಕಿಡ್ಸ್ ಶಾಲೆ ಆಂಗ್ಲ ಮಾಧ್ಯಮದ ಶಾಲೆಯಾಗಿದ್ದರೂ ಕೂಡ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ನಾಡಿನ ಜಾನಪದ ಸೊಗಡನ್ನು ಮಕ್ಕಳು ಬಿಂಬಿಸಿದರು. ಕಲಾವೈಭವದಲ್ಲಿ ಕಂಸಾಳೆ, ವೀರಗಾಸೆ, ಯಕ್ಷಗಾನ, ಹುಲಿ ಕುಣಿತ, ಕೋಲಾಟ ನಡೆದು ಕನ್ನಡ ನಾಡು ಸಂಸ್ಕೃತಿಗೆ ಸಂಬಂಧಿಸಿದಂತೆ ವಿವಿಧ ಹಾಡುಗಳಿಗೆ ಪುಟಾಣಿ ಮಕ್ಕಳು ನರ್ತಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link