ಕೋವಿಡ್ 19 ನಿಯಮ ಕಡ್ಡಾಯವಾಗಿ ಪಾಲಿಸಿ

ಗುಬ್ಬಿ

   ಮಾರಕ ಕೊರೋನ ವೈರಸ್ ತಡೆಗಟ್ಟಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಕೋವಿಡ್ 19 ರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ರೋಗ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಹಿರಿಯ ನ್ಯಾಯಾಧೀಶರಾದ ಫೈರೋಜ್ ಎಚ್ ಉಕ್ಕಲಿ ಕರೆ ನೀಡಿದರು.

   ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ತಾಲ್ಲೂಕು ಆಡÀಳಿತ ಮತ್ತು ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿದ್ದ ಕೋವಿಡ್ 19 ಜನಜಾಗೃತಿ ಅಭಿಯಾನ, ಪ್ರತಿಜ್ಞಾ ವಿಧಿ ಹಾಗೂ ಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಕೊರೋನ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪ್ರತಿಯೊಬ್ಬರು ರೋಗ ನಿಯಂತ್ರಣಕ್ಕೆ ಮುಂದಾಗಬೇಕಿದೆ ಎಂದು ತಿಳಿಸಿದರು.

   ತಹಸೀಲ್ದಾರ್ ಡಾ.ಪ್ರದೀಪ್‍ಕುಮಾರ್ ಹಿರೇಮಠ್ ಮಾತನಾಡಿ, ಸಾರ್ವಜನಿಕರು ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾಸ್ಕ್ ಧರಿಸುವುದು, ಕೈಗಳನ್ನು ತೊಳೆಯುವುದು, ವ್ಯಕ್ತಿಗತ ಅಂತರ ಕಾಪಾಡುವುದು ಸೇರಿದಂತೆ ಸ್ಯಾನಿಟೈಸರ್ ಬಳಸುವುದನ್ನು ಮರೆಯಬಾರದು. ಈ ಬಗ್ಗೆ ಜಾಗೃತಿ ಜಾಥಾ ಮೂಲಕ ಜನಸಾಮಾನ್ಯರಿಗೆ ಅರಿವು ಮೂಡಿಸುವಂತಹ ಕಾರ್ಯ ಮಾಡುತ್ತಿದ್ದು, ಪ್ರತಿಯೊಬ್ಬರೂ ಈ ಬಗ್ಗೆ ಅಗತ್ಯ ಎಚ್ಚರಿಕೆಯಿಂದಿರುವಂತೆ ತಿಳಿಸಿದರು.

   ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ಶಿವರಾಜು, ಎಸ್.ರಾಧ, ಎಸ್.ಗಣೇಶ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಷಡಾಕ್ಷರಿ, ತಾಲ್ಲೂಕು ವೈದ್ಯಾಧಿಕಾರಿ ಡಾ.ಬಿಂದು ಮಾಧವ, ವೃತ್ತ ನಿರೀಕ್ಷಕ ರಾಮಕೃಷ್ಣಯ್ಯ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ತೀರ್ಥಪ್ರಸಾದ್ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link