ಎಲ್ಲರೂ ರಸ್ತೆ ನಿಯಮಗಳನ್ನು  ಕಡ್ಡಾಯವಾಗಿ ಪಾಲಿಸಬೇಕು : ಲಕ್ಷ್ಮೀಕಾಂತ ನಾಲ್ವಾರ

ಹಾವೇರಿ
    ನಗರದ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ ಆವರಣದಲ್ಲಿ ಗುರುವಾರ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಸಾರ್ವಜನಿಕರಿಗೆ ಅರಿವು ಮೂಡಿಸಲು  ಬೃಹತ್ ಬೈಕ್ ರ್ಯಾಲಿ ನಡೆಸಲಾಯಿತು.ಬೈಕ್ ರ್ಯಾಲಿಗೆ ಚಾಲನೆ ನೀಡಿ ರಸ್ತೆ ಸ್ಟಿಕ್ಕರ್ ಬಿಡುಗಡೆ ಗೊಳಿಸಿ ಮಾತನಾಡಿದ ಪ್ರಾದೇಶಿಕ ಸಾರಿಗೆ ಅಧಿಕಾರಿ   ಲಕ್ಷ್ಮೀಕಾಂತ ನಾಲ್ವಾರ  ಅವರು ಎಲ್ಲರೂ ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ವಾಹನ ಚಾಲನೆ ಸಮಯದಲ್ಲಿ ಮೊಬೈಲ್ ಬಳಸಬಾರದು ಹಾಗೂ ದ್ವಿಚಕ್ರವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಬಳಸಬೇಕು ಎಂದು ಹೇಳಿದರು.
     ವಾಹನ ಚಾಲನೆ ಸಮಯದಲ್ಲಿ ವಾಹನಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಹೊಂದಿರಬೇಕು. ವಾಹನಗಳನ್ನು ಜಾಗರೂಕತೆ ಯಿಂದ ಚಲಾಯಿಸಬೇಕು ಹಾಗೂ ನಿಮ್ಮ ಅವಲಂಬಿತರ ಬಗ್ಗೆ ನೆನಪಿರಲಿ ಎಂದು ಸಲಹೆ ನೀಡಿದರು.ಕಾರ್ಯಕ್ರಮದಲ್ಲಿ ಮೋಟಾರು ವಾಹನ ನಿರೀಕ್ಷಕ ಶರಣಬಸಪ್ಪ ಅಕ್ಕಿ,  ಕಚೇರಿ ಅಧೀಕ್ಷಕ ರಮೇಶ ದೊಡ್ಡಮನಿ,  ಸತೀಶ್ ವೈ.ಆರ್. ಹಾಗೂ ಶ್ರೀಪಾದ ಬ್ಯಾಳಿ ಇತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link