ಜನರಿಗೆ ಸೌಲಭ್ಯ ತಲುಪಲು ಅಧಿಕಾರಿಗಳು ಶ್ರಮಿಸಿ

ಕುಣಿಗಲ್

    ಸರ್ಕಾರಿ ಸೌಲಭ್ಯಗಳು ಸಕಾಲದಲ್ಲಿ ಸಾರ್ವಜನಿಕರಿಗೆ ತಲುಪುವಂತಾಗಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕೆಂದು ಜಿಲ್ಲಾ ಲೋಕಾಯುಕ್ತ ಇನ್ಸ್‍ಪೆಕ್ಟರ್ ಶ್ರೀನಿವಾಸ್ ತಿಳಿಸಿದರು

    ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕರ ಮನವಿ ಸ್ವೀಕರಿಸಿ ಮಾತನಾಡಿ, ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಿಗೆ ಅಗತ್ಯ ಮಾಹಿತಿಯನ್ನು ಸರಿಯಾಗಿ ನೀಡದೆ ರೈತರು ಬಡವರು ಸಮಸ್ಯೆ ಉಳ್ಳವರು ದೂರು ಸಲ್ಲಿಸಲು ಮಾಹಿತಿ ಕೊರತೆಯಿಂದ ಸಾಧ್ಯವಾಗಿರುವುದಿಲ್ಲ. ಕಳೆದ ಬಾರಿ ನಾಲ್ಕು ಪ್ರಕರಣಗಳು ಬಗೆಹರಿಸಲು ಕ್ರಮ ಕೈಗೊಳ್ಳಲಾಗಿದೆ. ಕೋವಿಡ್ ಸಮಸ್ಯೆಯಿಂದ ಕಳೆದ ಏಳೆಂಟು ತಿಂಗಳಿಂದ ತಾಲ್ಲೂಕುವಾರು ಸಭೆ ನಡೆಸಲು ಸಾಧ್ಯವಾಗಿರುವುದಿಲ್ಲ ಎಂದರು.

   ಜಿಲ್ಲಾ ಲೋಕಾಯುಕ್ತ ಎಸ್ಪಿ ಮಹಮ್ಮದ್ ಉಸೇನ್ ಆಗಮಿಸಿದ್ದು, ಮುಂದಿನ ದಿನಗಳಲ್ಲಿ ಎರಡು ತಿಂಗಳಿಗೊಮ್ಮೆ ಸಭೆ ನಡೆಸಲಾಗುವುದು. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಸೌಲಭ್ಯಗಳಿಗೆ ಒತ್ತು ನೀಡಬೇಕೆಂದು ತಿಳಿಸಿದರು. ಸರ್ಕಾರಿ ಅನುದಾನಗಳು ಎಷ್ಟು ಪ್ರಮಾಣದಲ್ಲಿ ರೈತರಿಗೆ ಬಡವರಿಗೆ ನಾಗರಿಕರಿಗೆ ತಲುಪುತ್ತಿವೆ ಎಂಬುದರ ಬಗ್ಗೆ ಮುಂದಿನ ಸಭೆಗೆ ವಿವರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

   ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಿವರಾಜಯ್ಯ ಸಿಬ್ಬಂದಿಗಳಾದ ಯತಿಗೌಡ, ಅಹಮದ್ ಪಾಷಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap