ಹಿರೇಕೆರೂರು
ತಾಲೂಕಿನ ಕೋಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೃಷಿ ಸಚಿವ ಹಾಗೂ ಹಿರೇಕೆರೂರು ಶಾಸಕರಾದ ಬಿ.ಸಿ.ಪಾಟೀಲ್ ನೇತೃತ್ವದಲ್ಲಿ ಉಚಿತ ಮಾಸ್ಕ್ ಗಳನ್ನು ವಿತರಿಸಲಾಯಿತು
ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ಆಶಾಕಾರ್ಯಕರ್ತೆಯರು ಕೊರೊನಾ ವಾರಿಯರ್ಸ್ನಂತೆ ದುಡಿಯುತ್ತಿದ್ದು, ಮನೆಮನೆಗೆ ಹೋಗಿ ಜನರ ಆರೋಗ್ಯದ ಮಾಹಿತಿ ಪಡೆಯುತ್ತಿದ್ದಾರೆ.ವಿವರ ಕೇಳಲು ಬರುವ ಆಶಾಕಾರ್ಯಕರ್ತೆಯರಿಗೆ ಪ್ರತಿಯೊಬ್ಬರು ಸಹಕರಿಸಬೇಕು.ಗ್ರಾಮ ಪಂಚಾಯಿತಿ ಕಡೆಯಿಂದ ಆಶಾಕಾರ್ಯಕರ್ತೆಯರಿಗೆ ಥರ್ಮೋಮೀಟರ್ ಒದಗಿಸಿದಲ್ಲಿ ಜನರ ಆರೋಗ್ಯ ತಪಾಸಣೆಗೆ ಸಹಕಾರವಾಗಲಿದೆ ಎಂದರು.
ಜನರು ಯಾವುದೇ ಕಾರಣಕ್ಕೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು.ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಿಯಮಗಳನ್ನು ಉಲ್ಲಂಘಿಸಬಾರದು.ಯಾರಿಗಾದರೂ ಅನಾರೋಗ್ಯದ ಲಕ್ಷಣ ಕಂಡುಬಂದಲ್ಲಿ ಅದನ್ನು ತಕ್ಷಣವೇ ತಾಲೂಕು ವೈದ್ಯಾಧಿಕಾರಿ ಹಾಗೂ ತಾಲೂಕು ಆಡಳಿತದ ಗಮನಕ್ಕೆ ತರಬೇಕು ಎಂದು ಸಚಿವರು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ, ಗ್ರಾ. ಪಂ. ಅಧ್ಯಕ್ಷರು, ಸದಸ್ಯರು, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ