ನಾಮಪತ್ರ ಸಲ್ಲಿಕೆ : ಅಭ್ಯರ್ಥಿಗಳು ತಮ್ಮ ಎಲ್ಲಾ ವಿವರ ಸಲ್ಲಿಸುವುದು ಕಡ್ಡಾಯ …!!!

ಬೆಂಗಳೂರು

        ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಯು ನಾಮಪತ್ರ ಸಲ್ಲಿಸುವ ವೇಳೆ ತಮ್ಮ ಹಾಗೂ ಕುಟುಂಬದ ಸದಸ್ಯರ ಆಸ್ತಿ ವಿವರ, ತಮ್ಮ ಮೇಲಿನ ಪ್ರಕರಣಗಳ ವಿವರಗಳನ್ನು ಸಲ್ಲಿಸುವುದನ್ನು ಕಡ್ಡಾಯಮಾಡಲಾಗಿದೆ

        ಅಭ್ಯರ್ಥಿ ಹಾಗೂ ಕುಟುಂಬದ ಸದಸ್ಯರು 5 ವರ್ಷಗಳ ತಮ್ಮ ಆಸ್ತಿ ವಿವರಗಳು ತಮ್ಮ ಮೇಲಿರುವ ಪ್ರಕರಣಗಳ ಮಾಹಿತಿಯನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು. ಅಭ್ಯರ್ಥಿಗಳು ನಾಮಪತ್ರ ಅರ್ಜಿಯಲ್ಲಿ ಎಲ್ಲಾ ವಿವರಗಳನ್ನು ಕಡ್ಡಾಯವಾಗಿ ನಮೂದಿಸದಿದ್ದರೆ ನಾಮಪತ್ರಗಳನ್ನು ತಿರಸ್ಕರಿಲಾಗುವುದು ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್ ಅವರು ತಿಳಿಸಿದ್ದಾರೆ.

         ಮೊದಲು ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಮಾತ್ರವೇ ವಿವರಗಳನ್ನು ಸಲ್ಲಿಸಬೇಕಾಗಿತ್ತು. ಆದರೆ ಈ ಲೋಕಸಭಾ ಚುನಾವಣೆಯಲ್ಲಿ ಅವರ ಕುಟುಂಬದ ಸದಸ್ಯರ ಎಲ್ಲಾ ವಿವರಗಳನ್ನು ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಪ್ರತಿ ಅಭ್ಯರ್ಥಿಯೂ ಚುನಾವಣೆಯಲ್ಲಿ 70 ಲಕ್ಷ ರೂ. ಗಳನ್ನು ವೆಚ್ಚ ಮಾಡಬಹುದು. ಈ ಹಣವನ್ನು ಬ್ಯಾಂಕಿನಲ್ಲಿ ಇಡಬೇಕು. ಪ್ರತಿದಿನದ ಖರ್ಚು ವೆಚ್ಚಗಳ ಬಗ್ಗೆ ಆಯೋಗಕ್ಕೆ ಮಾಹಿತಿ ಒದಗಿಸಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.ಪ್ರತಿ ಅಭ್ಯರ್ಥಿಯ ಮೇಲೆ ಎಷ್ಟು ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ ಎಂಬ ಬಗ್ಗೆ ಮೂರು ಬಾರಿ ಪತ್ರಿಕೆಗಳಲ್ಲಿ ಹಾಗೂ ಟಿವಿ ಮಾಧ್ಯಮಗಳಲ್ಲಿ ಜಾಹೀರಾತು ನೀಡಬೇಕಾಗಿದೆ ನಾಮಪತ್ರ ಸಲ್ಲಿಕೆ

          ಮೊದಲ ಹಂತದ ಚುನಾವಣೆ ಅಧಿಸೂಚನೆ ಹೊರಡಿಸಲಾಗಿದೆ. ಬೆಂಗಳೂರು, ಉತ್ತರ ಕೇಂದ್ರ ಮತ್ತು ದಕ್ಷಿಣ ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮಾತ್ರವೇ ನಾಮಪತ್ರಗಳನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು ಎಂದು ತಿಳಿಸಿದರು

         ನಾಮಪತ್ರದ ಜೊತೆಗೆ ಪ್ರಮಾಣ ಪತ್ರ (26 ಅನ್ನು) ಸಲ್ಲಿಸಬೇಕು. ನಾಮಪತ್ರ ಸಲ್ಲಿಸಲು ಅಭ್ಯರ್ಥಿ ಸೇರಿದಂತೆ ಐವರಿಗೆ ಮಾತ್ರ ಅವಕಾಶವಿದೆ. ನಾಮಪತ್ರ ಸಲ್ಲಿಸುವಾಗ ಛಾಯಾಚಿತ್ರವನ್ನು ತೆಗೆದುಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಚುನಾವಣಾಧಿಕಾರಿಗಳ ಮುಂದೆ ಪ್ರತಿಜ್ಞಾ ವಿಧಿ ಬೋಧನೆ ಮಾಡಬೇಕು ಎಂದರು.

         ನಾಮಪತ್ರ 4ನೇ ಶನಿವಾರ 23 ರಂದು ನಾಮಪತ್ರವನ್ನು ಸ್ವೀಕರಿಸುವುದಿಲ್ಲ. 100 ಮೀಟರ್ ವರೆಗೆ 3 ವಾಹನಗಳಷ್ಟೇ ಪ್ರವೇಶವಿರುತ್ತದೆ ಚುನಾವಣಾ ಪ್ರಚಾರಕ್ಕೆ ಬಳಸುವ ವಾಹನಗಳಿಗೂ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆಯಬೇಕು. ಅಭ್ಯರ್ಥಿಯು ಪ್ರಚಾರಕ್ಕೆ ಮಾತ್ರ ಈ ವಾಹನಗಳನ್ನು ಬಳಸಲು ಅವಕಾಶವಿರುತ್ತದೆ. ಬೇರೆ ಕಾರ್ಯಾಗಳಿಗಾಗಿ ಬಳಸಿಕೊಂಡಲ್ಲಿ ನೀತಿ ಸಂಹಿತೆ ಅನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಡಿಸಿಪಿಗಳೇ ನೇತೃತ್ವ

        ಬೆಂಗಳೂರು ಕೇಂದ್ರ, ದಕ್ಷಿಣ ಮತ್ತು ಉತ್ತರ ಲೋಕಸಭಾ ಕ್ಷೇತ್ರಗಳಲ್ಲದೇ ಬೆಂಗಳೂರು ಗ್ರಾಮಾಂತರ,ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಬರುವ ನಗರದ ಪ್ರದೇಶಗಳಲ್ಲಿ ಡಿಸಿಪಿ ಮಟ್ಟದ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ಬಿಗಿಭದ್ರತೆ ಒದಗಿಸಲಾಗುವುದು ಎಂದು ನಗರ ಪೆÇಲೀಸ್ ಆಯುಕ್ತ ಟಿ. ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ.

        ಕೇಂದ್ರಕ್ಕೆ ಡಿಸಿಪಿ ರಾಹುಲ್‍ಕುಮಾರ್, ಉತ್ತರಕ್ಕೆ ಡಿಸಿಪಿ ಶಶಿಕುಮಾರ್ ಮತ್ತು ದಕ್ಷಿಣಕ್ಕೆ ಲೋಕಸಭಾ ಕ್ಷೇತ್ರಕ್ಕೆ ಡಿಸಿಪಿ ಅಣ್ಣಾಮಲೈ ಗ್ರಾಮಾಂತರಕ್ಕೆ ಡಿಸಿಪಿ ಇಷಾಪಂತ್ ಚಿಕ್ಕಬಳ್ಳಾಪುರಕ್ಕೆ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರ ನೇತೃತ್ವದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗುವುದು ಎಂದು ತಿಳಿಸಿದರು.

        ಪರವಾನಗಿ ಪಡೆದ ಶಸ್ತ್ರಾಸ್ತ್ರಗಳನ್ನು ಹೊಂದಿರುವವರು ಕೂಡಲೇ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಒಪ್ಪಿಸಬೇಕು. ನಗರದಲ್ಲಿ 9 ಸಾವಿರ ಆಯುಧಗಳು ಇದ್ದು ಈಗಾಗಲೇ 7 ಸಾವಿರ ಆಯುಧಗಳನ್ನು ವಾಪಾಸ್ ಪಡೆಯಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

         ರೌಡಿ ಚಟುವಟಿಕೆ ನಡೆಸುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದ್ದು, 5 ಸಾವಿರ ರೌಡಿಗಳ ಮೇಲೆ ನಿಗಾ ಇಡಲಾಗಿದೆ. 8ವಲಯಗಳಲ್ಲಿ 8 ಸಾವಿರ ರೌಡಿಗಳ ಮೇಲೆ ನಿಗಾ ಇಡಲಾಗಿದೆ. 5 ಸಾವಿರ ರೌಡಿಗಳಿಂದ ಕನ್ನಡತಿಯ ಬಗ್ಗೆ ಮುಚ್ಚಳಿಕೆ ಪತ್ರವನ್ನು ಬರೆಸಿಕೊಳ್ಳಲಾಗಿದೆ ಎಂದು ತಿಳಿಸಿದರು.

          2 ಸಾವಿರ ರೌಡಿಗಳಿಂದ 1 ಲಕ್ಷ ರೂಪಾಯಿಯಿಂದ 5 ಲಕ್ಷದ ರೂಪಾಯಿವರೆಗೆ ಬಾಂಡ್ ಹಾಗೂ ಮುಚ್ಚಳಿಕೆ ಪತ್ರ ಬರೆಸಿಕೊಳ್ಳಲಾಗಿದ್ದು, ಒಂದು ವೇಳೆ ಚುನಾವಣೆಯಲ್ಲಿ ರೌಡಿ ಚಟುವಟಿಕೆ ಮುಂದುವರಿಸಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಪೂರ್ವ ವಿಭಾಗದಲ್ಲಿ ಗೂಂಡಾ ಕಾಯ್ದೆ ಮೇಲೆ ಒಬ್ಬ ರೌಡಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದರು

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap