ರಾಷ್ಟ್ರಮಟ್ಟದ ಕಾರ್ಯಕ್ರಮಕ್ಕೆ ಮೋದಿ ಆಗಮನ : ಜಿಲ್ಲಾಡಳಿತದಿಂದ ಭರದ ಸಿದ್ದತೆ

ತುಮಕೂರು

    ಕೃಷಿ ಇಲಾಖೆಯ ರಾಷ್ಟ್ರ ಮಟ್ಟದ ಕಾರ್ಯಕ್ರಮವನ್ನು ತುಮಕೂರಿನಲ್ಲಿ ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿ ಮೋದಿಯವರು ಆಗಮಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಭರದ ಸಿದ್ಧತೆ ಮಾಡಲಾಗಿತ್ತು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‍ಕುಮಾರ್ ಮನವಿ ಮಾಡಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾತನಾಡಿದ ಅವರು, ಡಿ.24ರಂದು ಪ್ರಧಾನಿ ಕಚೇರಿಯಿಂದ ತುಮಕೂರಿಗೆ ಮೋದಿಯವರು ಭೇಟಿ ನೀಡುವ ಕುರಿತು ಮಾಹಿತಿ ತಿಳಿಸಿದರು. ಈ ಹಿನ್ನೆಲೆಯಲ್ಲಿ ಒಂದು ವಾರದಿಂದ ಭರದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಡಿ.30ರ ಸೋಮವಾರವಷ್ಟೆ ಖಚಿತ ಮಾಹಿತಿ ನೀಡಿದ್ದು, ತುಮಕೂರಿನಲ್ಲಿ ಎರಡು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

    ಮಧ್ಯಾಹ್ನ ತುಮಕೂರಿಗೆ ಆಗಮಿಸುವ ಮೋದಿಯವರು ಸಿದ್ದಗಂಗಾ ಮಠಕ್ಕೆ ತೆರಳಿದ್ದಾರೆ. ಅದು ಖಾಸಗಿ ಕಾರ್ಯಕ್ರಮವಾಗಿದೆ. ಅದಾದ ನಂತರ ಸರ್ಕಾರದ ಕಾರ್ಯಕ್ರಮ ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳುವುದು ಅಷ್ಟು ಸುಲಭದ ಮಾತಲ್ಲ. ಆದರೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸಂಪೂರ್ಣ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಎಸ್‍ಪಿಜಿ ( ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್ ) ಸೂಚನೆಗಳ ಪ್ರಕಾರ ಪ್ರಧಾನಿಯವರ ಆಗಮನಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದು ತಿಳಿಸಿದರು.

    ಕಾರ್ಯಕ್ರಮಕ್ಕೆ ವಿವಿಧ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಅವರಿಗೆ ವಿಐಪಿ ಪ್ರವೇಶವನ್ನು ಕಲ್ಪಿಸಲಾಗಿದೆ. ಅವರು ಕಾರ್ಯಕ್ರಮಕ್ಕೆ ಒಂದು ಗಂಟೆಯ ಮುಂಚೆಯೇ ಆಗಮಿಸಬೇಕು. ಅವರಿಗೆ ವಿವಿಧ ಕಡೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಪ್ರತಿಯೊಬ್ಬರು ಸಹಕರಿಸಿ ನಡೆದುಕೊಂಡೇ ಬರಬೇಕು. ನಗರದ ಮಧ್ಯಭಾಗದಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿರುವುದರಿಂದ ಪಾರ್ಕಿಂಗ್ ಸಮಸ್ಯೆ ಉಂಟಾಗಬಾರದು ಎಂಬ ನಿಟ್ಟಿನಲ್ಲಿ ಮೈದಾನದಿಂದ ಸ್ವಲ್ಪ ದೂರದಲ್ಲಿಯೆ ಪಿಕ್ ಅಪ್ ಅಂಡ್ ಡ್ರಾಪಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link