ವಿದ್ಯಾರ್ಥಿಗಳಿಗೆ ಬಸ್ ಪಾಸ್-ಲ್ಯಾಪ್ ಟಾಪ್ ದೊರಕಲಿ : ಎಸ್.ಪಿ. ಮುದ್ದಹನುಮೆಗೌಡ

ಮಧುಗಿರಿ

    ಗ್ರಾಮಾಂತರ ಪ್ರದೇಶದ ಮಕ್ಕಳ ಶಿಕ್ಷಣಕ್ಕೆ ಬಡತನ ಅಡ್ಡಿಯಾಗಬಾರದು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುತ್ತಿವೆ ಎಂದು ಸಂಸದ ಎಸ್.ಪಿ.ಮುದ್ದಹನುಮೆ ಗೌಡ ತಿಳಿಸಿದರು.

      ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2018-19ನೇ ಸಾಲಿನ ಕ್ರೀಡಾ, ಸಾಂಸ್ಕøತಿಕ, ಯುವ ರೆಡ್‍ಕ್ರಾಸ್, ಎನ್‍ಎಸ್‍ಎಸ್, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಚಟುವಟಿಕೆಗಳ, ದ್ವಿತೀಯ ಮತ್ತು ತೃತೀಯ ವರ್ಷದ ಸ್ನಾತಕ ಮತ್ತು ದ್ವಿತೀಯ ಸ್ನಾತಕೋತ್ತರ ವಿದ್ಯಾರ್ಥಿಗಳಿಂದ ಪ್ರಥಮ ವರ್ಷದ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಎರಡು ನೂತನ ತರಗತಿ ಕೊಠಡಿಗಳ ಉದ್ಘಾಟನಾ ಸಮಾರಂಭವನ್ನು ಮತ್ತು ಕಿರು ಶುದ್ದ ಕುಡಿಯುವ ನೀರಿನ ಘಟಕದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ತುಮಕೂರಿನಲ್ಲಿ ಪಾಸ್‍ಪೋರ್ಟ್ ಸೇವಾ ಕೇಂದ್ರ ಪ್ರಾರಂಭವಾಗಿ ಕೇವಲ 4 ತಿಂಗಳಾಗಿದ್ದು, ಈಗಾಗಲೇ 7 ಸಾವಿರ ಮಂದಿಗೆ ಪಾಸ್ ಪೋರ್ಟ್ ವಿತರಿಸಲಾಗಿದೆ.

      ಬೆಂಗಳೂರಿಗೆ ಪರ್ಯಾಯವಾಗಿ ತುಮಕೂರು ನಗರ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ದಿ ಪಥದತ್ತ ಸಾಗಲಿದೆ. ಈ ಹಿಂದೆ ರಾಜ್ಯ ಸರ್ಕಾರ ಘೋಷಿಸಿದಂತೆ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಬಸ್‍ಪಾಸ್, ಲ್ಯಾಪ್‍ಟಾಪ್‍ಗಳು ದೊರಕುವಂತಾಗಬೇಕು. ತುಮಕೂರಿಗೆ ಎಚ್‍ಎಎಲ್ ಮತ್ತು ಇಸ್ರೋ ಸಂಸ್ಥೆಗಳು ಬಂದಿದ್ದರಿಂದ ಸುಮಾರು 10 ಸಾವಿರ ಮಂದಿಗೆ ಉದ್ಯೋಗ ಸಿಗಲಿದೆ. ಈಗಾಗಲೇ ಕಾಲೇಜಿನಲ್ಲಿ ಶುದ್ದಕುಡಿಯುವ ನೀರಿನ ಘಟಕ ಪ್ರಾರಂಭಿಸಲಾಗಿದ್ದು, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗಿರುವುದರಿಂದ ಇನ್ನೊಂದು ಘಟಕ ಸ್ಥಾಪನೆಗೆ ಮತ್ತು ಸಭಾಂಗಣದ ವಿಸ್ತರಣೆಗೂ ಸಂಸದರ ಅನುದಾನ ನೀಡಲಾಗುವುದು ಎಂದರು.

      ಶಾಸಕ ಎಂ.ವಿ.ವೀರಭದ್ರಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಳ್ಳಿಗಾಡಿನ ವಿದ್ಯಾರ್ಥಿಗಳಲ್ಲಿ ಛಲ ಹೆಚ್ಚು. ಮಾನವೀಯ ಮೌಲ್ಯಗಳು ಹುಟ್ಟಿನಿಂದ ಬಂದಿರುತ್ತವೆ. ಆದುದರಿಂದ ಗ್ರಾಮೀಣ ವಿದ್ಯಾರ್ಥಿಗಳು ತಮ್ಮ ಆಯ್ಕೆಯ ಕ್ಷೇತ್ರದಲ್ಲಿ ಮಹತ್ತರವಾದ ಸಾಧನೆಯನ್ನು ಮಾಡಬೇಕಾಗಿದೆ. ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿಪುಲವಾದ ಅವಕಾಶಗಳಿದ್ದು ಸತತ ಪರಿಶ್ರಮದಿಂದ ಸಾಧನೆ ಮಾಡಬೇಕಾಗಿದೆ ಎಂದರು.

      ಪ್ರಾಂಶುಪಾಲ ಪ್ರೊ.ಡಿ.ಎಸ್.ಮುನೀಂದ್ರಕುಮಾರ್, ಕ.ಸಾ.ಅಕಾಡೆಮಿ ಸದಸ್ಯ ಡಾ.ಭೈರಮಂಗಲರಾಮೇಗೌಡ, ಉಪನ್ಯಾಸಕ ಕೆ.ಟಿ.ಸ್ವಾಮಿ, ಹಿರಿಯ ಸಾಹಿತಿ ಪ್ರೊ.ಮಲನ ಮೂರ್ತಿ, ಪ್ರೊ.ಬಾಳಪ್ಪ, ಪುರಸಭಾ ಸದಸ್ಯರಾದ ಎಂ.ಆರ್.ಜಗನ್ನಾಥ್, ಎಂ.ಎಸ.ಚಂದ್ರಶೇಖರ್‍ಬಾಬು, ಎಂ.ವಿ.ಮಂಜುನಾಥ್, ಲಾಲಾಪೇಟೆ ಮಂಜುನಾಥ್, ಮುಖಂಡರಾದ ತುಂಗೋಟಿರಾಮಣ್ಣ, ಟಿ.ಗೋವಿಂದರಾಜು, ನರಸಿಂಹಮೂರ್ತಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಜಿ.ಆರ್.ಧನಪಾಲ್, ಎನ್.ಕಿಶೋರ್, ಷಫಿ ಹಾಗೂ ಬೋಧಕ ವರ್ಗ, ವಿದ್ಯಾರ್ಥಿಗಳು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link