ಮೆಟ್ರೋ ರೈಲುಗಳ ಸೇವೆಯನ್ನು ವಿಸ್ತರಣೆ

ಬೆಂಗಳೂರು 

       2019ರ ಹೊಸ ವರ್ಷಾಚರಣೆಗೆ ಬೆಂಗಳೂರು ಮೆಟ್ರೋ ನಿಗಮ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ಹೊಸ ವರ್ಷಾಚರಣೆಗೆ ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ರೈಲುಗಳ ಸೇವೆಯನ್ನು ವಿಸ್ತರಿಸಿದೆ. ಡಿ.31 ರ ರಾತ್ರಿ 11 ಗಂಟೆಯಿಂದ ಜ.1 ರ ಮಧ್ಯರಾತ್ರಿ 1.30 ರವರೆಗೂ ಎಲ್ಲಾ ಮಾರ್ಗಗಳಲ್ಲಿ ಮೆಟ್ರೋ ಸೇವೆಯನ್ನು ವಿಸ್ತರಿಸುವುದಾಗಿ ಬೆಂಗಳೂರು ಮೆಟ್ರೋ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.

      ನಾಳೆ ಅಂದರೆ ಡಿಸೆಂಬರ್ 31ರ ರಾತ್ರಿ 11 ರಿಂದ ಪ್ರತಿ 15 ನಿಮಿಷಕ್ಕೊಮ್ಮೆ ಮೆಟ್ರೋ ರೈಲುಗಳು ಸಂಚರಿಸಲಿದ್ದು, ಕೆಂಪೇಗೌಡ ನಿಲ್ದಾಣದಿಂದ ಜ.1 ರ ರಾತ್ರಿ 2 ಗಂಟೆಯವರೆಗೂ 4 ದಿಕ್ಕುಗಳಿಗೂ ಮೆಟ್ರೋ ಸೇವೆ ಒದಗಿಸಲಾಗುವುದು. ಟ್ರಿನಿಟಿ ನಿಲ್ದಾಣ, ಎಂ.ಜಿ.ರಸ್ತೆ, ಕಬ್ಬನ್ ಪಾರ್ಕ್ ನಿಲ್ದಾಣ ಸೇರಿದಂತೆ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ನಾಳೆ ರಾತ್ರಿ 8 ಗಂಟೆಯಿಂದ ಕಾಗದದ ಟಿಕೆಟ್ಗ್ಳನ್ನು ವಿತರಿಸಲಾಗುತ್ತಿದ್ದು, ಸ್ಮಾರ್ಟ್ ಕಾರ್ಡುದಾರರಿಗೆ ಮೊದಲಿನಂತೆಯೇ ರಿಯಾಯಿತಿ ದರದಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ವಿಸ್ತರಣೆ ಸಂದರ್ಭದಲ್ಲಿ ಟೋಕನ್ ವಿತರಿಸಲಾಗುವುದಿಲ್ಲ ಎಂದು ನಿಗಮ ಸ್ಪಷ್ಟಪಡಿಸಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap