ಅಂಗವಿಕಲರಿಗೆ ಹೆಚ್ಚಿನ ಸೌಲಭ್ಯ ನೀಡಲು ಸರ್ಕಾರದ ಪ್ರಾಮಾಣಿಕ ಯತ್ನ

ಚಳ್ಳಕೆರೆ 

       ಕ್ಷೇತ್ರದ ವಿವಿಧ ಭಾಗಗಳಲ್ಲಿ ಹಲವಾರು ಸೌಲಭ್ಯಗಳಿಂದ ವಂಚಿತರಾದ, ಅಂಗವಿಕಲತೆಗೆ ಒಳಗಾದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಸೂಕ್ತ ಸಮಯದಲ್ಲಿ ಸೌಲಭ್ಯ ನೀಡುವ ಕಾರ್ಯ ಪ್ರಗತಿಯಲ್ಲಿದೆ. ಅಂಗವಿಕಲರಲ್ಲಿ ಆತ್ಮವಿಶ್ವಾಸ ತುಂಬಲು ಸರ್ಕಾರ ಹೆಚ್ಚು ಯೋಜನೆಗಳ ಮೂಲಕ ನೆರವು ನೀಡುತ್ತಿದೆ ಎಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ತಿಳಿಸಿದರು.

       ಅವರು, ಸೋಮವಾರ ಇಲ್ಲಿನ ಸರ್ಕಾರಿ ನೌಕರರ ಆವರಣದಲ್ಲಿ ತಾಲ್ಲೂಕಿನ ಗೋಪನಹಳ್ಳಿ ಗ್ರಾಮದ ಅಂಗವಿಕಲೆ ಮಹದೇವಮ್ಮ ಇವರಿಗೆ ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ನೀಡಿದ 68 ಸಾವಿರ ವೆಚ್ಚದ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ವಿತರಿಸಿ ಮಾತನಾಡಿದರು. ಕ್ಷೇತ್ರದಲ್ಲಿ ಈಗಾಗಲೇ ಅಂಗವಿಕಲರಿಗೆ ವಿವಿಧ ಯೋಜನೆಯಡಿ ಸೌಲಭ್ಯಗಳನ್ನು ಈಗಾಗಲೇ ನೀಡಿದ್ದು, ಇದು ಮುಂದಿನ ದಿನಗಳಲ್ಲೂ ಸಹ ಮುಂದುವರೆಯಲಿದೆ ಎಂದರು.

       ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಗಿರಿಯಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಗದ್ದಿಗೆ ತಿಪ್ಪೇಸ್ವಾಮಿ, ಮಾಜಿ ಸದಸ್ಯ ಸಿ.ಟಿ.ಶ್ರೀನಿವಾಸ್, ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ನರಸಿಂಹಮೂರ್ತಿ, ದಿವ್ಯಶ್ರೀ ಮುಂತಾದವರು ಉಪಸ್ಥಿತರಿದ್ದರು.

ಸಂತಸ ತಂದಿದೆ

        ಸರ್ಕಾರದಿಂದ ಅಂಗವಿಕಲರಿಗೆ ವಿಶೇಷ ಯೋಜನೆಯಡಿ ನೆರವು ನೀಡುತ್ತಿರುವುದು ಸಂತಸ ತಂದಿದೆ. ನನ್ನನ್ನು ಹುಡುಕಿ ಆಯ್ಕೆ ಮಾಡಿ 68 ಸಾವಿರ ಮೌಲ್ಯದ ಈ ವಾಹನವನ್ನು ಶಾಸಕ ಟಿ.ರಘುಮೂರ್ತಿಯವರು ನನಗೆ ನೀಡಿದ್ದು, ನನಗೆ ಹೆಚ್ಚು ಸಂತರ ತಂದಿದೆ. ನನ್ನಂತಹ ನೂರಾರು ಜನರಿಗೆ ಇಂತಹ ಯೋಜನೆಗಳ ಮೂಲಕ ಸೌಲಭ್ಯಗಳು ಸಿಗಲಿ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link