ದಸರಾ ಸಲುವಾಗಿ ಕೆ.ಎಸ್.ಆರ್.ಟಿ.ಸಿಯಿಂದ 500ಕ್ಕೂ ಹೆಚ್ಚುವರಿ ಬಸ್ ಸೇವೆ

ಬೆಂಗಳೂರು

       ಮೈಸೂರು ದಸರಾ ಮಹೋತ್ಸವದ ಅಂಗವಾಗಿ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕೆ.ಎಸ್.ಆರ್.ಟಿ.ಸಿಯಿಂದ 500ಕ್ಕೂ ಹೆಚ್ಚು ಬಸ್ ಸೇವೆ ಒದಗಿಸಲಾಗಿದೆ.

       ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಪ್ರಸ್ತುತ ಕಾರ್ಯಾಚರಣೆ ಮಾಡುತ್ತಿರುವ ವೇಗದೂತ, ಕರ್ನಾಟಕ ವೈಭವ, ರಾಜಹಂಸ, ಐರಾವತ ಹಾಗೂ ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಸಾರಿಗೆ ಸೇವೆಗಳನ್ನು ಒದಗಿಸಿದೆ.

       ಮೈಸೂರು ದಸರಾ ಪ್ರಯುಕ್ತ ಕರಾರಸಾ ನಿಗಮದಿಂದ 300 ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 150 ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಹಾಗೂ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್.ಅಣೆಕಟ್ಟು/ಬೃಂದಾವನ, ಶ್ರೀರಂಗಪಟ್ಟಣ, ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಹೆಚ್.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆ ಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು 150 ವಾಹನಗಳ ವ್ಯವಸ್ಥೆ ಮಾಡಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap