ಭ್ರಷ್ಟಚಾರ ನಿರ್ಮೂಲನೆ : ನೌಕರರ ಜೊತೆ ಅವರ ಕುಟುಂಬದವರು ಕೈ ಜೊಡಿಸಿ : ಎಸ್.ಎಸ್.ನಕುಲ್

ಬಳ್ಳಾರಿ

    ಭ್ರಷ್ಟ್ಟಾಚಾರ ನಿರ್ಮೂಲನೆಯಲ್ಲಿ ನೌಕರರ ಜೊತೆ ಅವರ ಕುಟುಂಬದವರು ಸಹ ಕೈ ಜೊಡಿಸಬೇಕು. ಭ್ರಷ್ಟಾಚಾರ ನಿಯಂತ್ರಿಸುವಲ್ಲಿ ಆತ್ಮ ಶುದ್ಧಿ ಅನುಗುಣವಾಗಿ ಕಾರ್ಯನಿರ್ವಹಿಸಬೇಕು. ಇದು ಕೇವಲ ಒಂದು ವಾರದ ಸಪ್ತಾಹಕ್ಕೆ ಸೀಮಿತವಾಗಬಾರದು ಭ್ರಷ್ಟಾಚಾರ ನಿರ್ಮೂಲನೆ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಹೇಳಿದರು.

   ಜಿಲ್ಲಾಡಳಿತ, ಜಿಪಂ, ಜಿಲ್ಲಾ ಪೊಲೀಸ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾನ್ಪರೆನ್ಸ್ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸತರ್ಕ ಭಾರತ-ಸಮೃದ್ಧ ಭಾರತ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಸಾರ್ವಜನಿಕರು ತಮ್ಮ ಕಚೇರಿಗೆ ಭೇಟಿ ನೀಡಿದಾಗ ಅವರ ಅವಶ್ಯಕತೆ ಹಾಗೂ ತೊಂದರೆಗಳನ್ನು ಅರ್ಥ ಮಾಡಿಕೊಂಡು ಅವರಿಂದ ಯಾವುದೇ ಫಲಾಪೇಕ್ಷೆ ಪಡೆಯದೆ ಅವರ ಕಾರ್ಯಗಳನ್ನು ಮಾಡಬೇಕು. ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕತೆಯನ್ನು ಪ್ರದರ್ಶಿಸಬೇಕು. ಭ್ರಷ್ಟಚಾರ ನಿಯಂತ್ರಿಸುವುದಕ್ಕೆ ಸಾರ್ವಜನಿಕರ ಸಹಕಾರ ತುಂಬ ಮುಖ್ಯ ಎಂದು ಈ ಸಂದರ್ಭದಲ್ಲಿ ಹೇಳಿದರು.

    ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೃಷ್ಣ ಬಿ.ಅಸೋಡೆ ಅವರು ಮಾತನಾಡಿ, ಭ್ರಷ್ಟಚಾರ ಮತ್ತು ಲಂಚಕೋರತನ ಸಮಾಜದ ದೊಡ್ಡ ಪಿಡುಗಾಗಿದ್ದು ಅದನ್ನು ಬುಡ ಸಮೇತ ನಿರ್ಮೂಲನೆ ಮಾಡಬೇಕು;ಈ ಮೂಲಕ ಅರ್ಥಹಿತ ಸಮಾಜ ನಿರ್ಮಾಣ ಮಾಡಬೇಕು ಎಂದರು.

    ಭ್ರಷ್ಟಾಚಾರ ಎಂಬುದು ಸಮಾಜದ ಏಳ್ಗೆಯನ್ನು ನಾಶ ಮಾಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ನ್ಯಾಯಾಧೀಶ ಅಸೋಡೆ ಅವರು ಭ್ರಷ್ಟಾಚಾರ ನಿಯಂತ್ರಿಸುವಲ್ಲಿ ಮೊದಲು ನಾವು ಬದಲಾವಣೆಯಾದರೆ ಭ್ರಷ್ಟಚಾರವನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂದರು.ದೇಶದ ಆರ್ಥಿಕ,ರಾಜಕೀಯ ಮತ್ತು ಸಾಮಾಜಿಕ ಅಭಿವೃದ್ಧಿಗೆ ಭ್ರಷ್ಟಾಚಾರ ಒಂದು ಪ್ರಮುಖ ಆಡಚಣೆಯಾಗಿದೆ. ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಸರಕಾರ,ನಾಗರಿಕರು ಮತ್ತು ಖಾಸಗಿ ವಲಯದ ಪಾಲುದಾರರು ಸೇರಿದಂತೆ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಾದ ಅಗತ್ಯ ಇದೆ ಎಂದರು.

    ಈ ಕಾರ್ಯಕ್ರಮಕ್ಕೂ ಮುಂಚೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೃಷ್ಣ ಬಿ.ಅಸೋಡೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಹಾಗೂ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧೀಕ್ಷಕರಾದ ಗುರುನಾಥ ಬ ಮತ್ತೂರ್ ಅವರು ಮಾತನಾಡಿ, ಜೀವನದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಪ್ರಾಮಾಣಿಕತೆ ಮತ್ತು ಕಾನೂನಿನ ನಿಯಮಗಳನ್ನು ಅನುಸರಿಸಬೇಕು. ಎಲ್ಲ ಕಾರ್ಯಗಳನ್ನು ಪ್ರಾಮಾಣಿಕ ಮತ್ತು ಪಾರದರ್ಶಕ ರೀತಿಯಲ್ಲಿ ನಿರ್ವಹಿಸಬೇಕು ಮತ್ತು ಸಾರ್ವಜನಿಕ ಹಿತಾಸಕ್ತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದರು.

    ಈ ಸಂದರ್ಭದಲ್ಲಿ ಪ್ರೋಬೇಷನರಿ ಐಎಎಸ್ ರಾಹುಲ್ ಸಂಕನೂರು,ಭ್ರಷ್ಟಾಚಾರ ನಿಗ್ರಹದಳದ ಡಿವೈಎಸ್ಪಿ ಚಂದ್ರಕಾಂತ ಪೂಜಾರಿ,ಎಸಿಬಿ ಇನ್‍ಸ್ಪೆಕ್ಟರ್‍ಗಳಾದ ಪ್ರಭುಲಿಂಗಯ್ಯ ಹಿರೇಮಠ,ರವಿಕುಮಾರ,ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿ ವರ್ಗದವರು ಇದ್ದರು. ಈ ಸತರ್ಕ ಭಾರತ-ಸಮೃದ್ಧ ಭಾರತ ಜಾಗೃತಿ ಅರಿವು ಸಪ್ತಾಹವು ಇಂದಿನಿಂದ ನ.2ರವರೆಗೆ ಜಿಲ್ಲೆಯಾದ್ಯಂತ ನಡೆಯಲಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link