ತುರುವೇಕೆರೆ
ತಾಲೂಕಿನ ವಿಶ್ವನಾಥಪುರ ಗ್ರಾಮದಲ್ಲಿನ ರೈತ ಜಗದೀಶ್ ಎಂಬುವರ ತೋಟದ ಮನೆಗೆ ಶುಕ್ರವಾರ ರಾತ್ರಿ ಆಕಸ್ಮಿಕ ಬೆಂಕಿ ತಗುಲಿ ಮನೆ ಹಾಗೂ ಮನೆಯಲ್ಲಿದ್ದ ತೆಂಗಿನ ಕಾಯಿ ಸುಟ್ಟು ಹೋಗಿರುವ ಘಟನೆ ನಡೆದಿದೆ.ಮನೆ, ತೆಂಗಿನ ಕಾಯಿ ಸೇರಿದಂತೆ ಹಲವು ವಸ್ತುಗಳು ಸುಟ್ಟು ಹೋಗಿದ್ದರಿಂದ ಅಪಾರ ನಷ್ಟ ಸಂಭವಿಸಿದೆ. ಶನಿವಾರ ಬೆಳಗ್ಗೆ ತೋಟಕ್ಕೆ ತೆರಳಿದ ಜಗದೀಶ್‍ಗೆ ಇದು ಕಂಡು ಬಂದಿದೆ. ಆಗ ಗ್ರಾಮಸ್ಥರು ಸೇರಿ ಇನ್ನೂ ಉರಿಯುತ್ತಿದ್ದ ಅಲ್ಪ ಸ್ವಲ್ಪ ಬೆಂಕಿಯನ್ನು ನಂದಿಸಿದ್ದಾರೆ.
ಇದು ಕಿಡಿಗೇಡಿಗಳ ಕೃತ್ಯ ಎಂದು ಅನುಮಾನ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯ್ತಿ ಸದಸ್ಯ ಬೊಮ್ಮಲಿಂಗಯ್ಯ, ಮಾಜಿ ಅಧ್ಯಕ್ಷ ರವಿಕುಮಾರ್ ಭೇಟಿ ನೀಡಿ ರೈತನಿಗೆ ಧೈರ್ಯ ತುಂಬಿ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಅವಘಡದ ಬಗ್ಗೆ ಪಟ್ಟಣದ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
