ರೈತನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ..!!

ಬೆಂಗಳೂರು

     ಮನಗೆ ಬೈಕ್‍ನಲ್ಲಿ ಹೋಗುತ್ತಿದ್ದ ರೈತರೊಬ್ಬರ ಕಣ್ಣಿಗೆ ಖಾರದ ಪುಡಿ ಎರಚಿ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಕೊಲೆ ಮಾಡಿರುವ ಘಟನೆ ರಾಮನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತ್ಳಿಯಲ್ಲಿ ನಡೆದಿದೆ.

      ರಾಮನಗರದ ಯರೇಹಳ್ಳಿಯ ಪುಟ್ಟರಾಜು (45)ಎಂದು ಕೊಲೆಯಾದವರನ್ನು ಗುರುತಿಸಲಾಗಿದೆ.ಬುಧವಾರ ಮಧ್ಯರಾತ್ರಿ ಬೈಕ್‍ನಲ್ಲಿ ತೆರಳುತ್ತಿದ್ದ ಹೋಗುತ್ತಿದ್ದ ಪುಟ್ಟರಾಜುರನ್ನ ದುಷ್ಕರ್ಮಿಗಳು ಅಡ್ಡಗಟ್ಟಿ ಕಣ್ಣಿಗೆ ಖಾರದ ಪುಡಿ ಎರಚಿ ಹಲ್ಲೆ ನಡೆಸಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

     ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಸುದ್ದಿ ತಿಳಿದ ತಕ್ಷಣ ರಾಮನಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ದುಷ್ಕರ್ಮಿಗಳ ಪತ್ತೆಗೆ ತೀವ್ರ ಶೋಧ ನಡೆಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link