ರೈತರು ಕೃಷಿಯಲ್ಲಿ ನಿರೀಕ್ಷಿತ ಸಾಧನೆ ತೋರದೇ ಸಾಯುವುದು ಸರಿಯಲ್ಲ : ಡಿಕೆಶಿ

ಬೆಂಗಳೂರು

      ಕಡಿಮೆ ನೀರಾವರಿ ಪ್ರದೇಶವಿರುವ ರೈತರಿಗಿಂತ ಹೆಚ್ಚಿನ ನೀರಾವರಿ ಪ್ರದೇಶಗಳಿರುವ ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.

     ಕೋಲಾರ, ಚಿಕ್ಕಬಳ್ಳಾಪುರ ಭಾಗಗಳಲ್ಲಿ ನೀರಿನ ಪ್ರಮಾಣ ಕಡಿಮೆಯಿದ್ದರೂ ರೈತರು ಕೃಷಿ ಚಟುವಟಿಕೆಗಳಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ ಮಂಡ್ಯ,ಹಾಸನ ಮೈಸೂರು ಭಾಗದಲ್ಲಿ ನೀರಾವರಿ ಸೌಲಭ್ಯ ಅಗತ್ಯಕ್ಕಿಂತ ಹೆಚ್ಚಿದೆಯಾದರೂ ಅಲ್ಲಿನ ರೈತರು ಕೃಷಿ ಚಟುವಟಿಕೆಗಳಲ್ಲಿ ನಿರೀಕ್ಷಿತ ಸಾಧನೆ ತೋರದೆ ಆತ್ಮಹತ್ಯೆಗೆ ಮುಂದಾಗುವುದು ಸರಿಯಲ್ಲ ಎಂದರು.

       ನಗರದಲ್ಲಿಂದು ಕೆಜಿ ರಸ್ತೆಯ ಎಫ್‍ಕೆಸಿಸಿಐ ಸಭಾಂಗಣದಲ್ಲಿ ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್ ಅಸೋಶಿಯೇಶನ್, ಸಾಯಿ ಸಂಕೇತ್ ಹಾಗೂ ಅಗ್ರಿಟೆಕ್ ನ ಸಂಯುಕ್ತ ಆಶ್ರಯದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಆಯೋಜಿಸಿರುವ ‘ಭವಿಷ್ಯದಲ್ಲಿ ರೈತ ಕೇಂದ್ರಿತ ನೀರಾವರಿ ಅಭಿವೃದ್ಧಿ’ ಕುರಿತ ಎರಡು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದ ಅವರು ಕೃಷಿ ಚಟುವಟಿಕೆಗಳಿಗೆ ನೀರು ಹೆಚ್ಚಿರುವ ಪ್ರದೇಶಗಳಲ್ಲಿಯೇ ರೈತರು ಆತ್ಮಹತ್ಯೆಗೆ ಮುಂದಾಗುತ್ತೀರುವುದು ದುರದೃಷ್ಟಕರ ಎಂದರು.

       ಕರ್ನಾಟಕದಲ್ಲಿ ಅತಿ ಹೆಚ್ಚು ಕೃಷಿ ಭೂಮಿ ಇದೆ.ಹೀಗಾಗಿ, ನೀರು ಬಳಕೆ, ಮತ್ತು ಆಧುನಿಕ ಕೃಷಿ ಅಳವಡಿಕೆಗೆ ಮುಂದಾಗಬೇಕು ಎಂದ ಅವರು, ಭೂಮಿ ಫಲವತ್ತತೆ ಬಗ್ಗೆಯೂ, ನಮಗೆ ಮಾಹಿತಿ ದೊರೆಯಬೇಕು. ಈ ನಿಟ್ಟಿನಲ್ಲಿ ಸಂಶೋಧನಾ ಅಗತ್ಯತೆ ಇದೆ ಎಂದು ನುಡಿದರು.

       ಕೃಷಿ ಸಚಿವ ಶಿವಶಂಕರ್ ರೆಡ್ಡಿ ಮಾತನಾಡಿ, ಸಾವಿರಾರು ಅಡಿ ಕೊರೆದರೂ ಅಂತರ್ಜಲ ಲಭ್ಯವಾಗುತ್ತಿಲ್ಲ, ಹಾಗಾಗಿ ಸಾಂಪ್ರದಾಯಿ ನೀರಾವರಿ ಪದ್ಧತಿಗೆ ಬದಲಾಗಿ ಸೂಕ್ಷ್ಮ ನೀರಾವರಿ ವ್ಯವಸ್ಥೆ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ರೈತರಿಗೆ ಅಗತ್ಯ ತಾಂತ್ರಿಕ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.

         ಅಸೋಶಿಯೇಶನ್ ಅಧ್ಯಕ್ಷ ಡಾ.ಮುರಳಿಕೃಷ್ಣ ರೆಡ್ಡಿ ಮಾತನಾಡಿ, ಇಂಡೋ ಇಸ್ರೇಲ್ ನೀರಾವರಿಯ ಉಪಕ್ರಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವ್ಯಾಪಕ ಸಮಾಲೋಚನೆಯನ್ನು ನಡೆಸಲಾಗುತ್ತಿದೆ. ಇನ್ನೂ, ನೀರಾವರಿಗೆ ಕುರಿತು ವಿವಿಧ ಸ್ತರಗಳಲ್ಲಿ ಕೆಲಸ ಮಾಡುವ 25ಕ್ಕೂ ಹೆಚ್ಚು ತಜ್ಞರು ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಲಿದ್ದಾರೆ ಎಂದರು.ಕಾರ್ಯಾಗಾರದಲ್ಲಿ ಬಾಗಲಕೋಟೆಯ ತೋಟಗಾರಿಕಾ ವಿಜ್ಞಾನ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ. ಡಿ.ಎಲ್.ಮಹೇಶ್ವರ, ಎಫ್ ಕೆಸಿಸಿಐ ಅಧ್ಯಕ್ಷ ಸುಧಾಕರ್ ಎಸ್ ಶೆಟ್ಟಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap