ಅಂತರ್ಜಲ ಮರುಪೂರಣದಿಂದ ರೈತರಿಗೆ ಹೆಚ್ಚಿನ ಲಾಭ

ತುಮಕೂರು

       ಅಂತರ್ಜಲ ಮರುಪೂರಣ ಮಾಡುವುದರಿಂದ ನಮ್ಮ ದೇಶದ ಬೆನ್ನೆಲುಬಾದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ನಿರ್ದೇಶಕರಾದ ಶ್ರೀ ರವೀಂದ್ರ ದೇಸಾಯಿ ಅವರು ತಿಳಿಸಿದರು.

      ತುಮಕೂರಿನ ಜಿಲ್ಲಾ ಪಂಚಾಯತ್ ಸಭಾಂಗಣ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಡೆದ ಅಂತರ್ಜಲ ಚೇತನ ಯೋಜನೆಯ ತರಬೇತಿ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮಲ್ಲಿನ ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದರಿಂದ ಕೊಳವೆಬಾವಿಗಳು ವಿಫಲವಾಗುವುದು ತಪ್ಪುತ್ತದೆ. ಅಲ್ಲದೆ ಪ್ರಕೃತಿ ವಿಕೋಪಗಳನ್ನು ತಪ್ಪಿಸಬಹುದು ಎಂದರು.

      ಅಂತರ್ಜಲ ಯೋಜನೆಯು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿದ್ದು, ಈ ಯೋಜನೆಯನ್ನು ಈಗಾಗಲೇ ಶಿವಮೊಗ್ಗ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಟಾನಗೊಳಿಸಲಾಗುತ್ತಿದೆ. ಅದೇ ರೀತಿ ತುಮಕೂರು ಜಿಲ್ಲೆಯ ಕೊರಟಗೆರೆ, ಗುಬ್ಬಿ, ತುಮಕೂರು, ತುರುವೇಕೆರೆ ಮತ್ತು ಕುಣಿಗಲ್ ತಾಲ್ಲೂಕುಗಳ 68 ಗ್ರಾಮ ಪಂಚಾಯಿತಿಗಳಲ್ಲಿ ಈ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಪಂಚಾಯಿತಿ ಅಧಿಕಾರಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳು ಈ ಅವಕಾಶವನ್ನು ಸಮರ್ಥವಾಗಿ ಸದುಪಯೋಗಪಡಿಸಿಕೊಳ್ಳುವಂತೆ ಅವರು ತಿಳಿಸಿದರು.

     ನದಿ ಮೂಲಗಳ ಆರಂಭ ಹಾಗೂ ಅಂತ್ಯವನ್ನು ಗಮನದಲ್ಲಿಟ್ಟುಕೊಂಡು ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅಂತರ್ಜಲ ಚೇತನ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ರೈತರ ಸಮಸ್ಯೆಗಳು ಮತ್ತು ಅಧಿಕಾರಿಗಳ ಸಮಸ್ಯೆಗಳಿಗೆ ಸ್ಪಂಧಿಸುವ ಮೂಲಕ ಸೇತುವೆಯಾಗಿ ಕಾರ್ಯನಿರ್ವಹಿಸಲಿದೆ. ಗೂಗಲ್ ಅಂತರ್ಜಾಲದಲ್ಲಿ mಥಿ ಚಿಠಿಠಿ ಅಪ್ಲಿಕೇಷನ್ ಅನ್ನು ಡೌನ್‍ಲೋಡ್ ಮಾಡಿಕೊಂಡು ಇದರ ಮೂಲಕ ನದಿ ಮೂಲಗಳ ಪ್ರಾರಂಭ ಹಾಗೂ ಅಂತ್ಯದ ಬಗ್ಗೆ ನಿಖರವಾದ ಮಾಹಿತಿ ತಿಳಿಯಬಹುದಾಗಿದೆ. ಇದರಿಂದಾಗಿ ಸೂಕ್ತ ಸ್ಥಳಗಳ ಆಯ್ಕೆ ಬಗ್ಗೆ ನಿಖರತೆ ಹಾಗೂ ಸ್ಪಷ್ಟತೆ ದೊರೆಯಲಿದೆ. ಹಾಗಾಗಿ ಎಲ್ಲರೂ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ತರಬೇತಿಯಲ್ಲಿ ತಿಳಿಸಿದರು.

     ರಾಜ್ಯ ಸರ್ಕಾರದ ಪ್ರಮುಖ ಯೋಜನೆಯಾದ ಅಂತರ್ ಜಲ ಚೇತನ ಯೋಜನೆಯನ್ನು ಅತೀ ಶೀಘ್ರದಲ್ಲೇ ತುಮಕೂರು ಜಿಲ್ಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಮೂಲಕ ಚಾಲನೆ ನೀಡಲಿದ್ದು, ಇಂದಿನಿಂದಲೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಿಂದ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಅವರು ಕಿವಿಮಾತು ಹೇಳಿದರು.ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ(ಅಭಿವೃದ್ಧಿ)ಗಳಾದ ಮಹೇಶ್‍ಕುಮಾರ್ ಅವರು ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

     ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್‍ನ ಯೋಜನಾ ಅಭಿಯಂತರರಾದ ಜಿ.ಆರ್. ಶ್ರೀನಿವಾಸ್, ಜಿಲ್ಲೆಯ ಐದು ತಾಲ್ಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು(ಗ್ರಾ.ಉ.) ಹಾಗೂ ನರೇಗಾ ತಾಂತ್ರಿಕ ಸಿಬ್ಬಂದಿ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.ಜಿಲ್ಲಾ ಐಇಸಿ ಸಂಯೋಜಕರಾದ ಉಮೇಶ್ ಹುಲಿಕುಂಟೆ ಅವರು ತರಬೇತಿ ಕಾರ್ಯಕ್ರಮದಲ್ಲಿ ಸ್ವಾಗತಿಸಿ, ನಿರೂಪಿಸಿ ವಂದಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link