ಬೆಂಗಳೂರು:
ಬೆಂಗಳೂರು ಕೃಷಿ ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಕೃಷಿ ಪದವಿ ವ್ಯಾಸಂಗ ಮಾಡುತ್ತಿದ್ದು ಆತ್ಮಹತ್ಯೆಗೆ ಶರಣಾಗಿರುವ ರೈತರ ಮಕ್ಕಳಿಗೆ 2018-19ನೇ ಸಾಲಿನಿಂದ ಶೈಕ್ಷಣಿಕ ಶುಲ್ಕ ಮನ್ನಾ ಮಾಡಲು ವಿವಿ ಆಡಳಿತ ಮಂಡಳಿ ನಿರ್ಧರಿಸಿದೆ.
ಬೆಂಗಳೂರು ಕೃಷಿ ವಿವಿ 378ನೇ ವ್ಯವಸ್ಥಾಪನಾ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಈ ಸಂಬಂಧ ಸುತ್ತೋಲೆ ಹೊರಡಿಸಿದೆ.
ಬೆಂಗಳೂರು ಕೃಷಿ ವಿವಿ ವ್ಯಾಪ್ತಿಯ ಪದವಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂದರೆ ಕರ್ನಾಟಕ ಪ್ರರೀಕ್ಷಾ ಪ್ರಾಧಿಕಾರ ಸಾಮಾನ್ಯ ಪ್ರವೇಶ ಪರೀಕ್ಷೆ (ಟಿಇಟಿ) ಯಲ್ಲಿ ಮೆರಿಟ್ ಆಧಾರದ ಮೇಲೆ ಆಯ್ಕೆಯಾದ ಹಾಗೂ ಆತ್ಮಹತ್ಯೆ ಮಾಡಿಕೊಂಡ ರೈತರ ಕನಿಷ್ಟ ಐದು ವಿದ್ಯಾರ್ಥಿಗಳಿಗೆ 2018-19ನೇ ಶೈಕ್ಷಣಿಕ ಸಾಲಿನಿಂದ ಶೈಕ್ಷಣಿಕ ಶುಲ್ಕ ಮನ್ನಾ ಮಾಡಲು ಕೃಷಿ ಇಲಾಖೆ ಕಾರ್ಯದರ್ಶಿ ಹಾಗೂ ವಿವಿ ಆಡಳಿತ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಶೈಕ್ಷಣಿಕ ಸಾಲ ಮನ್ನಾ ಸೌಲಭ್ಯ ಪಡೆಯಲು ಅಭ್ಯರ್ಥಿ ಮತ್ತು ಪೋಷಕರು ಕರ್ನಾಟಕದ ನಾಗರೀಕರಾಗಿಬೇಕು. ಅಭ್ಯರ್ಥಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಾಮಾನ್ಯ ಪರೀಕ್ಷೆ ಮೂಲಕ ಮೆರಿಟ್ ಆಧಾರದ ಮೇಲೆ ಸೀಟ್ನ್ನು ಪಡೆದುಕೊಂಡಿರಬೇಕು.
ಅಭ್ಯರ್ಥಿಯ ತಂದೆ ಅಥವಾ ತಾಯಿ ಕೃಷಿಕರಾಗಿದ್ದು, ಈ ಸಂಬಂಧ ಸರ್ಕಾರದಿಂದ ಪಡೆದಿರುವ ಪ್ರಮಾಣ ಪತ್ರ ಸಲ್ಲಿಸಬೇಕು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








