ಬೆಂಗಳೂರು: 

ಬೆಂಗಳೂರು ನಗರದ ಜನರ ಆರೋಗ್ಯ ದೃಷ್ಟಿಯಿಂದ ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದೆ ಅದರಲ್ಲಿ ಒಂದು ತಪ್ಪುಗಳಿಗೆ ದಂಡ ವಿಧಿಸುವ ಕಾರ್ಯಕ್ರಮ ನಗರದಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರು ಹಾಗೂ ಮೂತ್ರ ವಿಸರ್ಜನೆ ಮಾಡುವವರಿಗೆ ರೂ.500 ದಂಡ ವಿಧಿಸಲು ಸರ್ಕಾರ ನಿರ್ಧರಿಸಿದೆ.
ಹಾಲಿ ಇರುವ ರೂ.100 ದಂಡದ ಮೊತ್ತವನ್ನು ಶೀಘ್ರದಲ್ಲಿಯೇ ರೂ.500ಕ್ಕೆ ಹೆಚ್ಚಿಸಲಾಗುವುದು. ಕಸ ಎಸೆಯುವವರ ಮೇಲೆ ಕಣ್ಣಿಡಲು ಶೀಘ್ರದಲ್ಲಿಯೇ ವಾರ್ಡ್’ಗೊಬ್ಬ ಮಾಜಿ ಸೈನಿಕರನ್ನು ನೇಮಕ ಮಾಡಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
