ತುಮಕೂರು:
ಮಾಜಿ ಶಾಸಕ ಬಿ.ಸುರೇಶ್ ಗೌಡ ಅವರು ಪ್ರಚೋದಕಾರಿ ಭಾಷಣ ಮಾಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ.
ತುಮಕೂರು ತಾಲೂಕಿನ ಹೊನಸಿಗೆರೆಯಲ್ಲಿ ನಡೆದ ಸಭೆಯಲ್ಲಿ ಈ ರೀತಿಯ ಹೇಳಿಕೆ ನೀಡಿದ್ದು. ಜೆಡಿಎಸ್ ಬಗ್ಗೆ ಜನರಲ್ಲಿ ದ್ವೇಷ ಹುಟ್ಟುವ ರೀತಿ ಪ್ರಚೋದನಕಾರಿ ಭಾಷಣಮಾಡಿದ್ದು ವಿಚಕ್ಷಣಾದಳದ ಅಧಿಕಾರಿ ಜಯರಾಮಣ್ಣ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಜೆಡಿಎಸ್ ಗ್ರಾಮಾಂತರ ಶಾಸಕರಿಂದಲೂ ಎಸ್ಪಿಗೆ ದೂರು.ಈ ಹಿನ್ನೆಲೆಯಲ್ಲಿ ಸುರೇಶ್ ಗೌಡ ವಿರುದ್ಧ ಹೆಬ್ಬೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
