ಸಿಎಂ ಮತ್ತು ಇನ್ನು ಇತರರ ವಿರುದ್ಧ ಎಫ್ ಐ ಆರ್

ಬೆಂಗಳೂರು

      ರಾಜಕಾರಣಿಗಳು ಮತ್ತವರ ಸಂಬಂಧಿಕರು ಹಾಗೂ ಗುತ್ತಿಗೆದಾರರ ಮೇಲೆ ನಡೆದ ಆದಾಯ ತೆರಿಗೆ ದಾಳಿಯನ್ನು ಖಂಡಿಸಿ, ಐಟಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಇನ್ನಿತರ ಮುಖಂಡರುಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

       ಅನುಮತಿ ಪಡೆಯದೆ, ಪ್ರತಿಭಟನೆ ನಡೆಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವರಾದ ಡಿ.ಕೆ. ಶಿವಕುಮಾರ್, ಇನ್ನಿತರರ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

       ಆದಾಯ ತೆರಿಗೆ ಇಲಾಖೆ ದಾಳಿಯನ್ನು ಖಂಡಿಸಿ ಕಳೆದ ಮಾರ್ಚ್ 28 ರಂದು ಐಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಮುಖಂಡರು ಯಾವುದೇ ಅನುಮತಿ ಪಡೆದಿರಲಿಲ್ಲ. ಈ ಸಂಬಂಧ ಅಂದೇ ಫ್ಲೈಯಿಂಗ್ ಸ್ಕ್ವಾಡ್‍ನ ಅಧಿಕಾರಿಗಳು ನೀಡಿದ ದೂರು ಆಧರಿಸಿ, ಎಫ್‍ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

       ಪ್ರಕರಣದ ಸಂಬಂಧ ಪ್ರತಿಭಟನೆ ನಡೆಸಿದವರಿಂದ ಮಾಹಿತಿ ಪಡೆದುಕೊಳ್ಳಲಾಗಿದ್ದು, ಕಾನೂನು ರೀತಿಯಲ್ಲಿ ಪ್ರತಿಭಟನೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

      ಈ ನಡುವೆ ಐಟಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಮುಖಂಡರುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಐಟಿ ಇಲಾಖೆ ಪ್ರಧಾನ ಮುಖ್ಯ ಕಮಿಷನರ್ ಬಿ.ಆರ್. ಬಾಲಕೃಷ್ಣನ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಆ ಪತ್ರವನ್ನು ಆಯುಕ್ತ ಸಂಜೀವ್ ಕುಮಾರ್ ಅವರು, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಕಳುಹಿಸಿ ಸೂಚನೆ ನೀಡಿದ್ದಾರೆ. ಇದಕ್ಕೂ ಮೊದಲೇ ಪ್ರತಿಭಟನೆ ನಡೆಸಿದ ಮುಖಂಡರುಗಳ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link