ಮಧುಗಿರಿ
ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಹಸು ಮತ್ತು ಕರು ಸಜೀವ ದಹನವಾಗಿರುವ ಘಟನೆ ಕೋಡ್ಲಾಪುರ ಗ್ರಾಮದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ.
ಗ್ರಾಮದ ರೈತ ರಂಗಪ್ಪನವರಿಗೆ ಸೇರಿದ ಗುಡಿಸಲಿಗೆ ಮಧ್ಯರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿ ಒಂದು ಹಸು ಮತ್ತು ಕರು ಸಜೀವ ದಹನವಾಗಿದ್ದು, ಮತ್ತೊಂದು ಕರು ಗಂಭೀರವಾಗಿ ಗಾಯಗೊಂಡಿದೆ. ಘಟನೆಯಿಂದಾಗಿ 2ಲಕ್ಷ ರೂ ನಷ್ಟವಾಗಿದೆ ಎಂದು ಅಂದಾಜಿಸಲಾಗಿದ್ದು, ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ