ಬೆಂಗಳೂರು:
ಬೆಂಗಳೂರಿನ ಎಚ್‌ಎಎಲ್ ಕಾರ್ಖಾನೆಯ ಫೋರ್ಜ್ ಫೌಂಡ್ರಿ ವಿಭಾಗದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಕೆಲ ಕಾಲ ಆತಂಕಕ್ಕೆ ಕಾರಣವಾಗಿತ್ತು. ಬುಧವಾರ ಬೆಳಿಗ್ಗೆ 9.30ರ ಸುಮಾರು ಬೆಂಕಿ ಕಾಣಿಸಿದೆ. ಆದರೆ ಘಟನೆಯಲ್ಲಿ ಯಾವ ಪ್ರಾಣಹಾನಿ ಅಥ್ವಾ ಆಸ್ತಿಪಾಸ್ತಿ ಹಾನಿ ಸಂಭವಿಸಿಲ್ಲ.
ಮೆಗ್ನಿಷಿಯಂ ರಾಸಾಯನಿಕ ತ್ಯಾಜ್ಯವಿರಿಸಲಾದ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಮೂರು ಮಹಡಿಯಲ್ಲಿ ಬೆಂಕಿ ಹೊತ್ತಿ ಉರಿದಿದ್ದು, 8 ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿವೆ. ಸ್ಕ್ರ್ಯಾಪ್ ಸೆಕ್ಷನ್ನಲ್ಲಿ ಬೆಂಕಿ ಹೊತ್ತುಕೊಂಡಿತ್ತು. ಹೆಚ್ಎಎಲ್ನ ಅಗ್ನಿಶಾಮಕ ಮತ್ತು ಭದ್ರತಾ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಅವಘಡ ಸಂಭವಿಸಿದಾಗ ಕಾರ್ಖಾನೆಯಲ್ಲಿ ಯಾವ ಸಿಬ್ಬಂದಿಯೂ ಇರಲಿಲ್ಲ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
