ಬೆಂಗಳೂರು
ರಾಮಮೂರ್ತಿ ನಗರದ ಕಸ್ತೂರಿ ನಗರದ ಅಲಂಕಾರಿಕಾ ಆಭರಣಗಳ ಮಾರಾಟ ಮಳಿಗೆಗೆ ಇಂದು ಬೆಳಿಗ್ಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.
ಕಸ್ತೂರಿನಗರದ ಬಸ್ ನಿಲ್ದಾಣದ ಬಳಿಯ ಕಟ್ಟಡವೊಂದರ ಮೂರನೇ ಮಹಡಿಯಲ್ಲಿದ್ದ ಅಲಂಕಾರಿಕಾ ಆಭರಣಗಳ ಅಂಗಡಿಗೆ ಬೆಳಿಗ್ಗೆ 7ರ ಸುಮಾರಿನಲ್ಲಿ ಬೆಂಕಿ ತಗುಲಿ ಕ್ಷಣಾರ್ಧದಲ್ಲಿ ಇಡೀ ಅಂಗಡಿ ಆವರಿಸಿ, ಬೆಂಕಿ ಹೊರಬರಲಾರಂಭಿಸಿದೆ.
ಬೆಂಕಿಯನ್ನು ನೋಡಿದ ಸ್ಥಳೀಯರು ಮಾಹಿತಿ ನೀಡಿದ ಕೂಡಲೇ ಅಗ್ನಿಶಾಮಕ ದಳದ ನಾಲ್ಕು ವಾಹನಗಳು ಸ್ಥಳಕ್ಕೆ ಧಾವಿಸಿ, ಸತತ ಮೂರು ಗಂಟೆ ಶ್ರಮಿಸಿ ಬೆಂಕಿ ನಂದಿಸಿವೆ.
ಅಂಗಡಿಯಲ್ಲಿ ಯಾರೂ ಇಲ್ಲದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿಯಿಂದ ಲಕ್ಷಾಂತರ ರೂ. ಮೌಲ್ಯದ ಅಲಂಕಾರಿಕಾ ಆಭರಣಗಳು, ಕೃತಕ ಆಭರಣಗಳು, ಪೀಠೋಪಕರಣಗಳು ಬೆಂಕಿಗೆ ಆಹುತಿಯಾಗಿವೆ.ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣ ದಾಖಲಿಸಿರುವ ರಾಮಮೂರ್ತಿ ನಗರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








