ದೂರ ಸಂಪರ್ಕ ವ್ಯವಸ್ಥೆ ಸುಧಾರಣೆಗೆ ಮೊದಲ ಆಧ್ಯತೆ : ಸಿಎಂ

ಬೆಂಗಳೂರು :

  ‘ವರ್ಕ್ ಫ್ರಮ್ ಎನಿವೇರ್’ ಎಂಬ ಪರಿಕಲ್ಪನೆ ಜನಪ್ರಿಯವಾಗುತ್ತಿರುವ ಹಿನ್ನೆಲೆ ರಾಜ್ಯದ ದೂರಸಂಪರ್ಕ ವ್ಯವಸ್ಥೆ ಸುಧಾರಣೆಗೆ ಸಂಬಂಧಿಸಿದ ಭಾಗೀದಾರರೊಂದಿಗೆ ಶೀಘ್ರ ಸಭೆ ಕರೆದು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದರು.

    ಕೋವಿಡ್-19 ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಇಲಾಖೆಯ ಅಧಿಕಾರಿಗಳು ನಿರಂತರವಾಗಿ ಉದ್ಯಮದವರ ಸಂಪರ್ಕದಲ್ಲಿದ್ದು ನೈತಿಕ ಬೆಂಬಲ ಸೂಚಿಸಿದ್ದಾರೆ. ಹಲವು ಸ್ಟಾರ್ಟಪ್​ಗಳು ಕೋವಿಡ್ ಲಾಕ್​ಡೌನ್ ಸಂದರ್ಭಗಳಲ್ಲಿ ಜನರಿಗೆ ನೆರವಾಗಲು ಹಾಗೂ ಕೋವಿಡ್ ನಿರ್ವಹಣೆಗೆ ಮಹತ್ತರ ಕೊಡುಗೆ ನೀಡಿರುವುದನ್ನು ಮುಖ್ಯಮಂತ್ರಿಗಳು ಶ್ಲಾಘಿಸಿದರು.
 
    ಮುಂದಿನ ದಿನಗಳಲ್ಲಿ ವೈದ್ಯಕೀಯ ಉಪಕರಣ ಹಾಗೂ ತಂತ್ರಜ್ಞಾನ ವಲಯ ಸ್ಥಾಪಿಸುವ ವಿಷಯ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ತಿಳಿಸಿದರು.ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥ್‌ ನಾರಾಯಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ ವಿ ರಮಣರೆಡ್ಡಿ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link