ಹಾವೇರಿ
ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಕರಜಗಿ ಗ್ರಾಮ ಪಂಚಾಯತಿಯ ಕರಜಗಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರೋಜಗಾರ ದಿನಾಚರಣೆಯನ್ನು ಆಚರಿಸಲಾಯಿತು .
ಈ ಯೋಜನೆಯ ಬಗ್ಗೆ ತಾಲೂಕ ಪಂಚಾಯತಿಯ ತಾಲೂಕ ಮಾಹಿತಿ ಶಿಕ್ಷಣ ಮತ್ತು ಸಂವಹನ ಅಧಿಕಾರಿ ಶ್ರೀ ಜಿ ಎಸ್ ಬೆನ್ನೂರ ಮಾತನಾಡಿ ಜಲಾಮೃತ ಕಾಮಗಾರಿಗಳಿಗೆ ಆದ್ಯತೆ ನೀಡಬೆಕೆಂದು ತಿಳಿಸಿದರು. ಕೂಲಿ ಕಾರ್ಮಿಕರಿಗೆ ಕೆಲಸ ನೀಡುವ ಜವಾಬ್ದಾರಿ ಗ್ರಾಮ ಪಂಚಾಯತಿ ಮೇಲಿದೆ ಎಂದು ತಿಳಿಸುತ್ತಾ ತಾಲೂಕಿನ ಕರಜಗಿ ಗ್ರಾಮ ಪಂಚಾಯತಿಯ ಕರಜಗಿ ರಸ್ತೆಯಲ್ಲಿರುವ ಕೆಂಪಿನ ಕೆರೆಗೆ ಹರಿದು ಬರುವ ನೀರಿಗೆ ಕಚ್ಚಾ ಕಾಲುವೆ ಕಾಮಗಾರಿಯನ್ನು ವಿಕ್ಷೀಸಿ ಕೂಲಿಕಾರರನ್ನುದ್ದೇಶಿಸಿ ಮಾತನಾಡಿದರು.
ಹಾಗೇಯೆ ಕೂಲಿಕಾರರಗೆ ರೋಜಗಾರ್ ದಿನಾಚರಣೆಯನ್ನು ಆಚರಿಸಿ ಮತ್ತು ಉದ್ಯೋಗ ಚೀಟಿಯನ್ನು ವಿತರಿಸಲಾಯಿತು. ತಾಲೂಕಿನ 33 ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕೂಲಿ ಕಾರ್ಮಿಕರು ವಲಸೆ ಹೋಗುವುದನ್ನು ತಡೆಯಲು,ಮಾನವ ದಿನಗಳ ಸೃಜನೆ ಮಾಡಲು ಖಾತ್ರಿ ಯೋಜನೆ ವರದಾನವಾಗಿದೆ ಇದನ್ನು ಸದ್ಬಳಕೆ ಮಾಡಿಕೊಂಡು ಗ್ರಾಮದ ಅಭಿವೃಧ್ಧಿಗೆ ಕೈಜೋಡಿಸಬೇಕೆಂದು ತಿಳಿಸಿದರು.
ತಾಲೂಕಿನಲ್ಲಿ ಈ ವರ್ಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಬಳಸಿಕೊಂಡು ನೈಸರ್ಗಿಕ ಜಲ ಸಂರಕ್ಷಣೆ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಕೆರೆ-ಕಟ್ಟೆಗಳ ಅಭಿವೃದ್ಧಿಗೆ ತಾಲೂಕ ಪಂಚಾಯತಿ ಮುಂದಾಗಿದೆ. ತಾಲೂಕಿನಲ್ಲಿ ಪದೇ ಪದೇ ಬರ ಪರಿಸ್ಥಿತಿ ಎದುರಿಸುತ್ತಿದ್ದು, ಜನ, ಜನುವಾರುಗಳು ವರ್ಷದಿಂದ ವರ್ಷಕ್ಕೆ ಸಂಕಷ್ಟಕ್ಕೆ ಸಿಲುಕುತ್ತಿವೆ.
ಜಲದ ಮೂಲಗಳು ಕಡಿಯಾಗುತ್ತಿದ್ದು, ಕೆರೆ, ಕಟ್ಟೆಗಳಿಗೆ ಹರಿದು ಬರುವ ನೀರಿನ ಮಾರ್ಗಗಳು ಕಾಲುವೆಗಳ ಹೂಳು ಹಾಗೂ ಗಿಡ ಗಂಟೆಗಳಿಂದ ಮುಚ್ಚಿ ಹೋಗಿವೆ ಇದರಿಂದಾಗಿ ಕೆರೆ-ಕಟ್ಟೆಗಳಲ್ಲಿ ನೀರು ಕಾಣದಾಗಿ ಅಂತರರ್ಜಲ ಮಟ್ಟ ಪಾತಾಳಕ್ಕೆ ಕುಸಿಯುತ್ತಿದೆ ಇದರ ಜೊತೆಗೆ ಗ್ರಾಮೀಣ ಪ್ರದೇಶದ ಕೂಲಿಕಾರರು ಉದ್ಯೋಗ ಅರಸಿಕೊಂಡು ನಗರ, ಪಟ್ಟಣಗಳಿಗೆ ವಲಸೆ ಹೋಗುತ್ತಿದ್ದಾರೆ ಈ ಸಂಕಷ್ಟದ ಪರಿಸ್ಥಿತಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಉದ್ಯೋಗ ಖಾತರಿ ಬಳಸಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ಮುಂದುವರೆದು ಪಂಚಾಯತ ಆಭಿವೃಧ್ಧಿ ಅಧಿಕಾರಿಗಳಾದ ಲೋಕೇಶ ಪಟ್ಟಣ, ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ವಲಸೆ ತಪ್ಪಿಸಿಲು ತಾಲೂಕಿನಲ್ಲಿ ನೀರಿನ ಮೂಲಗಳನ್ನು ಉಳಿಸಿಕೊಳ್ಳುವುದು ಕೆರೆ-ಕಟ್ಟೆಗಳನ್ನು ಅಭಿವೃದ್ಧಿಪಡಿಸಿ ನೀರು ನಿಲ್ಲುವಂತೆ ಮಾಡುವುದು ಅತೀ ಅವಶ್ಯಕವಾಗಿದೆ. ಹೀಗಾಗಿ ಈ ವರ್ಷ ತಾಲೂಕಿನಲ್ಲಿ ನೈಸರ್ಗಿಕ ಜಲ ಸಂರಕ್ಷಣೆಗೆ ಕಾಮಗಾರಿಗಳನ್ನು ಮಾತ್ರ ಕೈಗೊಳ್ಳಲು ನಿರ್ಧರಿಸಿದ್ದು, ಇದರಿಂದ ಎರಡು ಬಗೆಯ ಪ್ರಯೋಜನ ಆಗಲಿದೆ.
ಜಲಮೂಲಗಳನ್ನು ಅಭಿವೃದ್ಧಿಪಡಿಸುವುದು ಒಂದಡೆಯಾದರೆ ಮತ್ತೊಂದಡೆ ಹೆಚ್ಚ ಜನರಿಗೆ ಉದ್ಯೋಗ ಖಾತರಿಯಡಿ ಕೂಲಿ ಕೆಲಸ ಕೊಟ್ಟಂತಾಗಲಿದೆ. ಅಲ್ಲದೇ ಕೂಲಿಕಾರರು ಉದ್ಯೋಗಕ್ಕಾಗಿ ಬೇರೆಡೆ ವಲಸೆ ಹೋಗುವುದನ್ನು ತಪ್ಪಿಸಿದಂತಾಗುತ್ತದೆ.
ಎಂದರು ಹಾಗೇಯೇ ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಸ್ಥಳೀಯವಾಗಿ ಉದ್ಯೋಗ ದೊರೆಯುವಂತೆ ಮಾಡಲು ತಾಲೂಕ ಪಂಚಾಯತ ಬದ್ಧವಾಗಿ ಇದ್ದು, ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಸಾಮೂಹಿಕವಾಗಿ ಹೆಚ್ಚು ಕೂಲಿಕಾರರು ಪಾಲಗೋಳ್ಳುವಂತಹ ಕಾಮಗಾರಿಗಳನ್ನು ಪ್ರಾರಂಭಿಸಲು ಸೂಚನೆ ನೀಡಲಾಗಿದೆ. ಮತ್ತು ಈಗಾಗಲೇ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕೆರೆಗಳ ಹೂಳೆತ್ತುವುದು, ಗೋ ಕಟ್ಟೆಗಳ ಅಭಿವೃದ್ಧಿ, ಕೃಷಿ ಹೊಂಡ, ಬದು ನಿರ್ಮಾಣ, ಕಲ್ಯಾಣಿಗಳ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕ ಪಂಚಾಯತಿಯ ಇಂಜಿನಿಯರಾದ ಇಮ್ರಾನಖಾನ್, ಪಂಚಾಯತ ಬಿಎಫ್‍ಟಿ ಸಂಜಿವ ಮೆಗಳಮನಿ, ಪಂಚಾಯತಿ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು