ಸಂಚಾರಿ ನಿಯಮ ಪಾಲನೆ ಪ್ರತಿಯೊಬ್ಬರ ಕರ್ತವ್ಯ : ಬಿ.ಎಸ್. ಯಡಿಯೂರಪ್ಪ

ಬೆಂಗಳೂರು

    ಸಂಚಾರ ನಿಯಮಗಳ ಪಾಲನೆಯು ಪ್ರತಿಯೊಬ್ಬ ನಾಗರೀಕನ ಕರ್ತವ್ಯವಾಗಿ ಸಂಸ್ಕೃತಿಯಾಗಿ ಜೀವನದ ವಿಧಾನವಾಗಿ ನೆಲೆಗೊಳ್ಳಬೇಕಾದ ಅಗತ್ಯವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರತಿಪಾದಿಸಿದ್ದಾರೆ.ನಗರದ ಕಠೀಂರವ ಕ್ರೀಡಾಂಗಣದಲ್ಲಿ ಮಂಗಳವಾರ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವುದು ಕೇವಲ ಗೃಹ ಇಲಾಖೆಯ ಕೆಲಸವಲ್ಲ, ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಹೇಳಿದರು.

    ಸಂಚಾರ ನಿಯಮಗಳ ಕಡ್ಡಾಯ ಪಾಲನೆ ಮಾಡುವುದು ಹಾಗೂ ಆಧುನಿಕ ತಂತ್ರಜ್ಞಾನಗಳ ಅಳವಡಿಸುವುದರಿಂದ ಅಪಘಾತ ಪ್ರಮಾಣವನ್ನು ಸ್ವಲ್ಪ ಪ್ರಮಾಣದಲ್ಲಿ ಕಡಿಮೆ ಮಾಡಬಹುದಾದರೂ ಪೂರ್ತಿ ಪ್ರಮಾಣದಲ್ಲಿ ಕಡಿಮೆಯಾಗಲು ಪ್ರತಿಯೊಬ್ಬರಲ್ಲು ಸಂಚಾರ ನಿಯಮ ಪಾಲನೆಯು ಕರ್ತವ್ಯವಾಗಿ ಮಾರ್ಪಾಟಾದಾಗ ಮಾತ್ರ ಸಾಧ್ಯ ಎಂದು ಹೇಳಿದರು.

   ಅಡ್ಡಾದಿಡ್ಡಿ ವಾಹನ ಚಾಲನೆ, ಮದ್ಯಪಾನ ಸೇವಿಸಿ ವಾಹನ ಚಲಾಯಿಸುವುದು, ಫುಟ್ಪಾತ್ ಮೇಲೆ ಸಂಚರಿಸಿ ತಮ್ಮ ಜೀವಕ್ಕೆ ಕುತ್ತು ತಂದುಕೊಳ್ಳುವುದಲ್ಲದೆ ಬೇರೆಯವರಿಗೂ ಅಪಾಯವುಂಟಾಗುವುದನ್ನು ತಪ್ಪಿಸಲು ಸಂಚಾರ ನಿಯಮ ಪಾಲನೆಯನ್ನು ಜೀವನ ವಿಧಾನವಾಗಿ ಬಳಸಿಕೊಳ್ಳಬೇಕು ಎಂದರು.

ಜಾಗೃತಿ ಅಗತ್ಯ

    ರಾಜ್ಯದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತದಿಂದ 10,317 ಮಂದಿ ಸಾವನ್ನಪ್ಪುತ್ತಿದ್ದು, 49,571 ಮಂದಿ ಗಾಯಗೊಳ್ಳುತ್ತಿದ್ದಾರೆ. ಜನಸಂಖ್ಯೆ ಹೆಚ್ಚಾದಂತೆ ಅಪಘಾತ, ಸಂಚಾರ ದಟ್ಟಣೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ ಎಂದರು.

   ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಶಾಲಾ ಮಕ್ಕಳಿಗೆ ಸಂಚಾರ ದಟ್ಟಣೆ ಬಗ್ಗೆ ಅರಿವು ಮೂಡಿಸಿದರೆ, ಅದರಿಂದ ಸಾಕಷ್ಟು ಪ್ರಯೋಜನಗಳಾಗಲಿವೆ. ದಂಡ ವಿಧಿಸುವುದರಿಂದ ಮಾತ್ರ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಅಸಾಧ್ಯ ಎಂದು ಹೇಳಿದರು.

    ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಭಾರತವು ಅತಿ ಹೆಚ್ಚು ಜನಸಂಖ್ಯೆ ಹೊಂದಿದ ದೇಶವಾಗಿದೆ. ಅದರ ಜತೆಗೆ ಬೆಳೆಯುತ್ತಿರುವ ಸಂಚಾರ ದಟ್ಟಣೆ ನಿವಾರಣೆಯೂ ಸವಾಲಿನ ಕೆಲಸವಾಗಿದೆ ಎಂದರು.

ದೊಡ್ಡ ಅಭಿಯಾನ

    ಅಪಘಾತವನ್ನು ಕಡಿಮೆ ಮಾಡಿ ಸಂಚಾರ ನಿಯಮಗಳನ್ನು ಪಾಲಿಸುವುದು ಸಮಾಜದ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದರು. ಶಾಲಾ-ಮೊಹಲ್ಲ, ಪ್ರದೇಶ ಇನ್ನಿತರ ಕಡೆಗಳಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ದೊಡ್ಡ ಅಭಿಯಾನ ನಡೆಸಲಾಗುವುದು.ಸಂಚಾರ ದಟ್ಟಣೆಯಿಂದಾಗುವ ತೊಂದರೆಗಳ ಬಗ್ಗೆ ಸಾರ್ವಜನಿಕರಿಗೆ ಅಭಿಯಾನದ ಮೂಲಕ ಅರಿವು ಮೂಡಿಸಲಾಗುವುದು ಎಂದರು.

    ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಿರಂತರ ರಸ್ತೆ ಸುರಕ್ಷತಾ ಸಪ್ತಾಹವನ್ನು ಇನ್ನು 1 ವರ್ಷಗಳ ಕಾಲ ನಡೆಸಲಾಗುವುದು. ರಾಜ್ಯದ ಜಿಲ್ಲಾಕೇಂದ್ರ, ತಾಲ್ಲೂಕು ಕೇಂದ್ರಗಳಲ್ಲಿ ಸಪ್ತಾಹ ನಡೆಯಲಿದ್ದು, ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು ಎಂದರು.

     ಕಾರ್ಯಕ್ರಮದಲ್ಲಿ ಶಾಸಕ ರಿಜ್ವಾನ್ ಅರ್ಷದ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್. ರಾಜು, ನಗರ ಪೊಲೀಸ್ ಆಯುಕ್ತ ಭಾಸ್ಕರ್‌ರಾವ್, ಹೆಚ್ಚುವರಿ ಪೊಲೀಸ್ ಆಯುಕ್ತರಾದ ಉಮೇಶ್ ಕುಮಾರ್, ಮುರುಗನ್, ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಹಾಗೂ ನಗರದ ಎಲ್ಲ ಡಿಸಿಪಿಗಳು ಪಾಲ್ಗೊಂಡಿದ್ದರು.

   ಎರಡು ದಿನಗಳ ಕಾಲ ರಾಜ್ಯದ ಜಿಲ್ಲಾ ಪ್ರವಾಸ ಕೈಗೊಂಡು ಅಲ್ಲಿನ ಸಮಸ್ಯೆಗಳನ್ನು ಅಲಿಸಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು ಗರುವಾರದಿಂದ ಎರಡು ದಿನಗಳ ಕಾಲ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು ಅವರ ಜೊತೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap