ಲೋಕಸಭಾ ಚುನಾವಣೆ: ಕರ್ತವ್ಯನಿರತರಿಗೆ ಊಟೋಪಹಾರದ ವ್ಯವಸ್ಥೆಗೆ ಸೂಚನೆ

ತುಮಕೂರು

     ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಎಲ್ಲಾ ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಬೆಳಗಿನ ಉಪಹಾರ, ಮಧ್ಯಾಹ್ನ ಊಟದ ವ್ಯವಸ್ಥೆ ಕಲ್ಪಿಸಬೇಕೆಂದು ನಿಯೋಜಿತ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭಾ ಕಲ್ಯಾಣ್ ಸೂಚಿಸಿದರು.

     ಜಿಲ್ಲಾ ಪಂಚಾಯತ್ ವಿಡಿಯೋ ಸಂವಾದ ಕೇಂದ್ರದಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಎಲ್ಲಾ ಮತಗಟ್ಟೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿರುವ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ವಿಕಲಚೇತರನ್ನು ಮತಗಟ್ಟೆ ಕೇಂದ್ರಗಳಿಗೆ ಕರೆದುಕೊಂಡು ಹೋಗಿ ಮತ್ತು ಮನೆಗೆ ಮರಳಿ ತಲುಪಿಸಲು ಉಚಿತ ಆಟೋ ವ್ಯವಸ್ಥೆ, ಮತಗಟ್ಟೆಗಳಲ್ಲಿ ಲಭ್ಯವಿರುವ ವ್ಹೀಲ್‍ಚೇರ್, ವಿದ್ಯಾರ್ಥಿ ಸ್ವಯಂ ಸೇವಕರು, ಮತ್ತಿತರ ಮತದಾನದ ಮುಂಜಾಗೃತಾ ಕ್ರಮಗಳ ಬಗ್ಗೆ ಚರ್ಚಿಸಿದರು.

     ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾ ಮಟ್ಟದ ತಾಲ್ಲೂಕು ನೋಡಲ್ ಅಧಿಕಾರಿಗಳು, ತಾಲ್ಲೂಕು ಕೇಂದ್ರಗಳಲ್ಲಿ ಬಿಇಓ, ಸಿಡಿಪಿಓ, ಮಧುಗಿರಿ ಮತ್ತು ತುಮಕೂರು ಡಿಡಿಪಿಐ, ಎಲ್ಲಾ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರುಗಳು ತಾಲ್ಲೂಕು ಕೇಂದ್ರಗಳ ಮೂಲಕ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ