ಸಚಿವ ಸ್ಥಾನದಿಂದ ವಂಚಿತವಾದ ಜಾರಕೀಹೊಳಿ ಕುಟುಂಬ.!

ಬೆಂಗಳೂರು

     ಕಳೆದ 15 ವರ್ಷಗಳಿಂದ ನಿರಂತರವಾಗಿ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಪಡೆಯುತ್ತಿದ್ದ ಜಾರಕಿಹೊಳಿ ಕುಟುಂಬ ಈ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯದೆ ವಂಚಿತವಾಗಿದೆ.

     2008 ರಲ್ಲಿ ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸ್ಥಾನ ಕಲ್ಪಿಸಲಾಗಿತ್ತು. ಆದರೆ ಸೋಮವಾರ ಸಂಜೆವರೆಗೆ ಅರಬಾವಿ ಕ್ಷೇತ್ರದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪುನಃ ಸಚಿವ ಸ್ಥಾನ ಸಿಗಲಿದೆ ಎಂಬ ವಿಶ್ವಾಸ ಮೂಡಿತ್ತಾದರೂ, ಮಂಗಳವಾರ ಬೆಳಗ್ಗೆ ಅವರ ಹೆಸರು ಪಟ್ಟಿಯಿಂದ ಕೈಬಿಡಲಾಗಿದೆ.

     ಕಳೆದ 15 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಜಾರಕಿಹೊಳಿ ಕುಟುಂಬ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಪಡೆಯಲು ವಿಫಲವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಸತೀಶ್ ಜಾರಕಿಹೊಳಿ, ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಲಾಗಿತ್ತು.

     ನಂತರ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ರಮೇಶ್ ಹಾಗೂ ಸತೀಶ್ ಜಾರಕಿಹೊಳಿ ಅವರಿಗೆ ಅವಕಾಶ ಕಲ್ಪಿಸಿದ್ದರು. ನಂತರ ನಡೆದ ರಾಜಕೀಯ ಜಂಜಾಟದಿಂದ ರಮೇಶ್ ಜಾರಕಿಹೊಳಿ ಸಂಪುಟಕ್ಕೆ ರಾಜೀನಾಮೆ ನೀಡಿ ಹೊರ ಬಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap