ಹುಬ್ಬಳ್ಳಿ:
ಧಾರವಾಡದಲ್ಲಿ ನಡೆಯುತ್ತಿರುವ 84 ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕಾಗಿ ಸಾರಿಗೆ ಸಂಸ್ಥೆಯಿಂದ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದ್ದು.ಈ ಬಗ್ಗೆ ಸಾರಿಗೆ ಇಲಾಖೆ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.
ಜುಬಿಲಿ ವೃತ್ತದಿಂದ ಸಮ್ಮೇಳನ ನಡೆಯುವ ಕೃಷಿ ವಿವಿ ಆವರಣದವರೆಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದ್ದು, ವಾಯುವ್ಯ ಸಾರಿಗೆ ಸಂಸ್ಥೆ, ಬೇಂದ್ರೆ ನಗರ ಸಾರಿಗೆ, ಟಾಟಾ ಮಾರ್ಕೊಪೋಲೊ, ಶಾಲಾ ವಾಹನಗಳಿಂದ ಉಚಿತ ಸಾರಿಗೆ ವ್ಯವಸ್ಥೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಸಮ್ಮೇಳನಕ್ಕೆ ವಿವಿಧೆಡೆಯಿಂದ ಧಾರವಾಡಕ್ಕೆ ಬರುವ ಸಾಹಿತ್ಯಾಸಕ್ತರಿಗೆ ಇದರಿಂದ ಅನುಕೂಲವಾಗುತ್ತಿದೆ ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
