ಶಾಲಾ ವಿಧ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ

ಸಿರಿಗೇರಿ

         ಇಲ್ಲಿನ ಸರಕಾರಿ ಪ್ರೌಢ ಶಾಲೆಯಲ್ಲಿ ಶನಿವಾರ ಶಾಲಾ ವಿಧ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

      ಈ ಸಂಧರ್ಭದಲ್ಲಿ ಮಾತನಾಡಿದ ಶಾಲಾ ಮುಖ್ಯಗುರು ಕೆ.ವೀರಪ್ಪ “ಸರಕಾರ ವಿಧ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗಾಗಿ ಕ್ಷೀರಭಾಗ್ಯ, ಬಿಸಿಯೂಟ, ಸಮವಸ್ತ್ರ, ಸೈಕಲ್, ವಿಧ್ಯಾರ್ಥಿ ವೇತನ ಸೇರಿದಂತೆ ನಾನಾ ಸೌಲಭ್ಯಗಳನ್ನು ನೀಡುತ್ತಿದೆ. ಆದರೆ ಇದನ್ನು ಸದುಪಯೋಗ ಪಡಿಸಿಕೊಂಡು ವಿಧ್ಯಾಭ್ಯಾಸದಿಂದ ದೂರ ಸರಿಯುತ್ತಿರುವುದು ದುರಂತದ ಸಂಗತಿಯಾಗಿದೆ. ಪೋಷಕರು ಯಾವುದೇ ಕಾರಣಕ್ಕೂ ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ಶಿಕ್ಷಕರಿಗೆ ಸಹಕಾರ ನೀಡಬೇಕಾದ ಅಗತ್ಯವಿದೆ ಎಂದರು. ತದ ನಂತರ ಸೈಕಲ್ ವಿತರಿಸಲಾಯಿತು.

      ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ಕೊಳ್ಳಿ ದ್ಯಾವಮ್ಮ ಪವಾಡಿನಾಯ್ಕ, ಜಿಪಂ ಸದಸ್ಯೆ ರತ್ನಮ್ಮ ಅಡಿವೆಯ್ಯಸ್ವಾಮಿ, ತಾಪಂ ಸದಸ್ಯ ವಿ.ರೇಣುಕಪ್ಪ, ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಬಕ್ಕಾಟೆ ನಾಗೇಂದ್ರಪ್ಪ, ಖಾಜಾ ಸೇರಿದಂತೆ ವಿಧ್ಯಾರ್ಥಿ ಹಾಗೂ ಪೋಷಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಾಲಾ ಶಿಕ್ಷಕರಾದ ರಾಮಾಂಜಿನಿ ಸ್ವಾಗತಿಸಿ, ಮಹಮ್ಮದ್ ಖಾಸಿಂ ನಿರೂಪಿಸಿ, ಕೃಷ್ಣ ವಂದಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link