ತುಮಕೂರು:
ನಗರದ ಗೋಕುಲ ಬಡಾವಣೆಯ ಗೋಕುಲ ಭವನದಲ್ಲಿ ಅ.7 ರಂದು ಉಚಿತ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರ ನಡೆಯಿತು. ಇದರ ಉದ್ಘಾಟನೆಯನ್ನು ಶಾಸಕ ಜಿ.ಬಿ.ಜ್ಯೋತಿಗಣೇಶ್ ನೆರವೇರಿಸಿದರು. ಅಧ್ಯಕ್ಷತೆಯನ್ನು ಪ್ರಜ್ಞಾ ಗೋಕುಲ ಮೊದಲ ಹಂತದ ನಾಗರಿಕ ಸಮಿತಿ ಅಧ್ಯಕ್ಷ ಚೆಲುವರಾಜು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪಾಲಿಕೆ ಸದಸ್ಯ ಬಿ.ಜಿ.ಕೃಷ್ಣಪ್ಪ ಆಗಮಿಸಿದ್ದರು. ಅತಿಥಿಗಳಾಗಿ ಡಾ.ಎಸ್.ಪರಮೇಶ್, ಮರಿಬಸಪ್ಪ, ಡಾ.ಎಸ್.ಪಿ.ಪದ್ಮಪ್ರಸಾದ್, ಎಲ್.ರಮೇಶ್ ನಾಯಕ್ ಅವರುಗಳು ಉಪಸ್ಥಿತರಿದ್ದರು.
ಈ ಆರೋಗ್ಯ ಶಿಬಿರದಲ್ಲಿ ಶ್ರೀ ಸಿದ್ಧಗಂಗಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇವರಿಂದ ಕಣ್ಣಿನ ತಪಾಸಣೆ, ಕೀಲು ಮತ್ತು ಮೂಳೆ ತಪಾಸಣೆ, ಕಿವಿ, ಮೂಗು, ಗಂಟಲು ತಪಾಸಣೆ, ರಕ್ತದೊತ್ತಡ, ಮಧುಮೇಹ, ಬಿ.ಎಂ.ಐ. ತಪಾಸಣೆ ಮುಂತಾದ ತಪಾಸಣೆ ನಡೆಸಲಾಯಿತು. ನಾಗರಿಕರು ಈ ಆರೋಗ್ಯ ಶಿಬಿರದ ಪ್ರಯೋಜನ ಪಡೆದುಕೊಂಡರು. ಈ ಸಂದರ್ಭದಲ್ಲಿ 32ನೇ ವಾರ್ಡಿನ ಪಾಲಿಕೆ ಸದಸ್ಯ ಬಿ.ಜಿ.ಕೃಷ್ಣಪ್ಪ, ಹೆಚ್.ಎಂ.ರವೀಶ್, ಜಯರಾಮಯ್ಯ, ಚಂದ್ರಕಲಾ, ಎಸ್.ಮಹಾದೇವಯ್ಯ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








