ಹಿರಿಯೂರು :
ಸಂಘಟನೆಗಳು ಹೋರಾಟದ ಜತೆಗೆ ಇಂತಹ ಉಚಿತ ಆರೋಗ್ಯ ಶಿಬಿರಗಳನ್ನು ನಡೆಸುವ ಮೂಲಕ ಬಡವರ ನೆರವಿಗೆ ನಿಲ್ಲಬೇಕು ಎಂಬುದಾಗಿ ಬ್ಲಾಕ್ ಕಾಂಗ್ರೆಸ್ ಎಸ್.ಸಿ. ಘಟಕದ ಗ್ರಾಮಾಂತರ ಅಧ್ಯಕ್ಷ ಜಿ.ಎಲ್.ಮೂರ್ತಿ ಹೇಳಿದರು. ಶಿಬಿರವನ್ನು ಉದ್ಘಾಟಿಸಿದರು.
ನಗರದ ಅಂಬೇಡ್ಕರ್ ಸ್ವಾಭಿಮಾನಿಸೇನೆ ಹಾಗೂ ದಾವಣಗೆರೆಯ ಎಸ್.ಎಸ್.ನಾರಾಯಣ ಹಾರ್ಟ್‍ಸೆಂಟರ್ ಇವರುಗಳ ನೇತೃತ್ವದಲ್ಲಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಹೃದಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಕೋದಂಡರಾಮ್ ವಹಿಸಿದ್ದರು. ನಾರಾಯಣ ಆಸ್ಪತ್ರೆಯ ಡಾ.ಗುರುರಾಜ್ ಸೇರಿದಂತೆ ಸಂಘಟನೆಯ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ