ದಾವಣಗೆರೆ:
ಇಲ್ಲಿನ ಯಲ್ಲಮ್ಮ ನಗರದ 4ನೇ ಮುಖ್ಯ ರಸ್ತೆಯಲ್ಲಿರುವ ಶ್ರೀಬನ್ನಿಮಹಾಂಕಾಳಿ ದೇವಸ್ಥಾನದಲ್ಲಿ ನಾಳೆಯಿಂದ (ಅ.18ರಿಂದ) 20ರ ವರೆಗೆ 44ನೇ ವರ್ಷದ ದಸರಾ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ.
ಅ.18ರ ಆಯುಧ ಪೂಜೆಯ ದಿನದಂದು ದೇವಿಗೆ ಅಭಿಷೇಕ ಮತ್ತು ಕುಂಭಾಭಿಷೇಕ ನೆರವೇಲಿದೆ. ಅ.19ರಂದು ಸಂಜೆ ಬನ್ನಿ ಮುಡಿಯುವ ಕಾರ್ಯಕ್ರಮ ನಡೆಯಲಿದೆ. ಅ.20ರಂದು ಮಧ್ಯಾಹ್ನ 1.30ಕ್ಕೆ ಅನ್ನ ಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಶ್ರೀಬನ್ನಿಮಹಾಂಕಾಳಿ ದೇವಸ್ಥಾನ ಸಮಿತಿ ಪ್ರಕಟಣೆಯಲ್ಲಿ ಕೋರಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
