ಬೆಂಗಳೂರು
ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ರೌಡಿಗಳು, ಹಳೆ ಆರೋಪಿಗಳನ್ನು ಯಲಹಂಕ ಪೊಲೀಸ್ ಠಾಣೆಗೆ ಕರೆತಂದು ಪೊಲೀಸರು ವಿಚಾರಣೆ ನಡೆಸಿ ಮಾಹಿತಿ ಪಡೆದುಕೊಂಡರು.
ಕೊಲೆ, ಕೊಲೆಯತ್ನ, ಸುಲಿಗೆ, ಕಳ್ಳತನ, ಇನ್ನಿತರ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದ ರೌಡಿಗಳು, ಹಳೆ ಆರೋಪಿಗಳು ಸೇರಿದಂತೆ ಸುಮಾರು 150ಕ್ಕೂ ಹೆಚ್ಚು ಮಂದಿಯ ಮನೆಗಳ ಮೇಲೆ ದಾಳಿ ನಡೆಸಿದ ಯಲಹಂಕ ಪೊಲೀಸರು ಅವರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ
ರೌಡಿಗಳು ಹಾಗೂ ಹಳೆ ಆರೋಪಿಗಳ ಉದ್ಯೋಗ, ಚಟುವಟಿಕೆ, ವಾಸಸ್ಥಳ, ಸಂಬಂಧಿಕರ ಮಾಹಿತಿ, ಬಳಸುವ ಮೊಬೈಲ್ ಸಂಖ್ಯೆ, ಇನ್ನಿತರ ಮಾಹಿತಿಯನ್ನು ಕಲೆ ಹಾಕಲಾಗಿದೆ ಎಂದು ಡಿಸಿಪಿ ಕಲಾಕೃಷ್ಣಸ್ವಾಮಿ ತಿಳಿಸಿದ್ದಾರೆ.
ಠಾಣೆಯ ಆವರಣಕ್ಕೆ ಕರೆ ತಂದಿದ್ದ ಎಲ್ಲರಿಂದಲೂ ಒಬ್ಬರ ಹಿಂದೊಬ್ಬರಂತೆ ಮಾಹಿತಿ ಪಡೆದು ಮುಂದೆ ಅಪರಾಧ ಚಟುವಟಿಕೆಗಳಲ್ಲಿ ತೊಡಗದೆ ಉತ್ತಮ ಜೀವನ ನಡೆಸುವಂತೆ ಎಚ್ಚರಿಕೆ ನೀಡಲಾಗಿದೆ.
ವಿಚಾರಣೆ ವೇಳೆ ಅಪರಾಧ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದ ಕೆಲವರನ್ನು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ರೌಡಿಗಳ ಮನೆ ಮೇಲೆ ದಾಳಿ ನಡೆಸಲು ರಚಿಸಲಾಗಿದ್ದ ವಿಶೇಷ ಪೊಲೀಸ್ ತಂಡ ಇಂದು ನಸುಕಿನಿಂದಲೇ ಕಾರ್ಯಾಚರಣೆ ನಡೆಸಿ ರೌಡಿಗಳು ಹಾಗೂ ಹಳೆ ಆರೋಪಿಗಳನ್ನು ಠಾಣೆಗೆ ಕರೆತಂದು ಮಾಹಿತಿ ಸಂಗ್ರಹಿಸಿದೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ