ಕನಕ ಜಯಂತಿ ಯಶಸ್ಸಿಗೆ ತಾಲ್ಲೂಕು ಆಡಳಿತ ಸಂಪೂರ್ಣ ಸಹಕಾರ

ಚಳ್ಳಕೆರೆ

         ನಾಡಿನ ಶ್ರೇಷ್ಠ ದಾರ್ಶನಿಕ, ಭಕ್ತ ಕನಕದಾಸ ಜಯಂತಿ ಕಾರ್ಯಕ್ರಮವನ್ನು ಡಿ.16ರ ಭಾನುವಾರ ನಗರದ ರೇವಣಸಿದ್ದೇಶ್ವರ ವಿದ್ಯಾವರ್ಧಕ ಸಂಘದ ಕುರುಬರ ಹಾಸ್ಟಲ್ ಆವರಣದಲ್ಲಿ ನಡೆಸಲು ಸಿದ್ದತೆಗಳು ಬರದಿಂದ ಸಾಗಿವೆ ಎಂದು ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ್ ತಿಳಿಸಿದರು.

          ಅವರು, ಶುಕ್ರವಾರ ಸಂಜೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಕಾರ್ಯಕ್ರಮದ ಪೂರ್ವಸಿದ್ದತಾ ಸಭೆಯ ಪರಿಶೀಲನೆ ಸಂದರ್ಭದಲ್ಲಿ ಕಾರ್ಯಕ್ರಮದ ರೂಪರೇಷೆಗಳ ಬಗ್ಗೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ತಾಲ್ಲೂಕು ಕುರುಬ ಸಮುದಾಯದ ಮುಖಂಡರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಟಿ.ರಘುಮೂರ್ತಿ ವಹಿಸಲಿದ್ದು, ಅಂದು ತಾಲ್ಲೂಕು ಕಚೇರಿ ಆವರಣದಲ್ಲಿ ಬೆಳಗ್ಗೆ 9.30ಕ್ಕೆ ಮೆರವಣಿಗೆಗೆ ಚಾಲನೆ ನೀಡುವರು. ಕನಕ ಜಯಂತಿ ಕಾರ್ಯಕ್ರಮಕ್ಕೆ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗ ಸಮುದಾಯದ ಪ್ರತಿನಿಧಿಗಳು ಮೆರವಣಿಗೆ ಹಾಗೂ ಕಾರ್ಯಕ್ರಮದಲ್ಲಿ ತಪ್ಪದೆ ಹಾಜರಿರಬೇಕೆಂದು ಮನವಿ ಮಾಡಿದರು.

        ಈಗಾಗಲೇ ಕಾರ್ಯಕ್ರಮದ ಯಶಸ್ಸಿ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತ ಹಾಗೂ ಸಮುದಾಯದ ಮುಖಂಡರು ವಿವಿಧ ಜವಾಬ್ದಾರಿಗಳನ್ನು ವಹಿಸಿಕೊಂಡು ಅದರಂತೆ ಎಲ್ಲಾ ಕಾರ್ಯಕ್ರಮಗಳನ್ನು ಪೂರೈಸುವಂತೆ ಅವರು ಮನವಿ ಮಾಡಿದರು. ತಾಲ್ಲೂಕು ಆಡಳಿತವೂ ಸಹ ಕನಕ ಜಯಂತಿ ಕಾರ್ಯಕ್ರಮದ ಯಶಸ್ಸಿಗೆ ಪೂರ್ಣ ಪ್ರಮಾಣದಲ್ಲಿ ಸಹಕಾರ ನೀಡಲಿದೆ ಎಂದರು.

        ಸಭೆಯಲ್ಲಿ ಪೌರಾಯುಕ್ತ ಜೆ.ಟಿ.ಹನುಮಂತರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ವೆಂಕಟೇಶಪ್ಪ, ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿ ಮಾಲತಿ, ಕೃಷಿ ಅಧಿಕಾರಿ ಎನ್.ಮಾರುತಿ, ಸಮಾಜ ಕಲ್ಯಾಣ ಇಲಾಖೆ ರವಿಶಂಕರ್, ತೋಟಗಾರಿಕೆ ಇಲಾಖೆ ವಿರೂಪಾಕ್ಷಪ್ಪ, ಲೋಕೋಪಯೋಗಿ ಇಲಾಖೆ ಎಇಇ ಮಂಜಪ್ಪ, ರೇಷ್ಮ ಇಲಾಖೆ ಕೆಂಚಡಿಯಪ್ಪ, ಸಮುದಾಯದ ಮುಖಂಡರಾದ ಆರ್.ಮಲ್ಲೇಶಪ್ಪ, ನಗರಸಭಾ ಸದಸ್ಯ ಎಂ.ಜೆ.ರಾಘವೇಂದ್ರ, ಪಾತಲಿಂಗಪ್ಪ, ವಿ.ಮಂಜುನಾಥ, ಪರಸಪ್ಪ, ಕಂದಾಯಾಧಿಕಾರಿ ಶರಣಬಸಪ್ಪ, ಗ್ರಾಮ ಲೆಕ್ಕಾಧಿಕಾರಿ ರಾಜೇಶ್, ಡಿ.ಶ್ರೀನಿವಾಸ್ ಮುಂತಾದವರು ಭಾಗವಹಿಸಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link