ಚಳ್ಳಕೆರೆ
ಕಳೆದ ಐದು ವರ್ಷಗಳಿಂದ ರಾಷ್ಟ್ರವನ್ನು ವಿರೋಧಿ ಶಕ್ತಿಗಳಿಂದ ರಕ್ಷಣೆ ಮಾಡುವ ಮೂಲಕ ವಿಶ್ವಮಟ್ಟದಲ್ಲಿ ಭಾರತ ತನ್ನದೇಯಾದ ಸಾರ್ವಭೌಮತೆಯನ್ನು ಮೆರೆಯಲು ಕಾರಣರಾದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಯೋಜನೆಗಳನ್ನು ಮನೆ, ಮನೆಗೂ ತಲುಪಿಸುವುದಲ್ಲದೆ ಅವರ ಜನಪರ ಕಾರ್ಯಕ್ರಮಗಳಿಗೆ ಉದಾರವಾಗಿ ದೇಣಿಗೆ ನೀಡುವ ಮೂಲಕ ಸಹಕರಿಸಬೇಕೆಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ, ಯುವ ಮುಖಂಡ ಬಾಳೆಮಂಡಿರಾಮದಾಸ್ ತಿಳಿಸಿದರು.
ಅವರು, ಸೋಮವಾರ ಪಕ್ಷದ ಕಾರ್ಯಾಲಯದಲ್ಲಿ ಮೋದಿಯವರ ಜನಪ್ರಿಯ ಕಾರ್ಯಕ್ರಮಗಳ ಮಾಹಿತಿ ಹಾಗೂ ರಾಷ್ಟ್ರ ಸಂರಕ್ಷಣೆಗೆ ಉದಾರವಾಗಿ ದೇಣಿಗೆ ನೀಡುವ ಮೂಲಕ ಪ್ರಗತಿಪರ ಕಾರ್ಯಗಳಿಗೆ ಸಹಕಾರಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಭಾರತೀಯ ಜನತಾ ಪಕ್ಷದ ಸಂಸ್ಥಾಪಕ ಪಂಡಿತ್ ದೀನ್‍ದಯಾಳ್ ಉಪಾಧ್ಯಾಯರ ಜನ್ಮ ದಿನವಾದ ಇಂದು ನಾವೆಲ್ಲರೂ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಪಕ್ಷಕ್ಕೆ ಬಲತುಂಬೋಣವೆಂದು ಕರೆ ನೀಡಿದರು.
ಹಿರಿಯ ಮುಖಂಡ ಪಿ.ಬೋರನಾಯಕ ಮಾತನಾಡಿ, ಈಗಾಗಲೇ ವಿಶ್ವಮಟ್ಟದಲ್ಲಿ ಖ್ಯಾತಿಯಾಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮದೇಯಾದ ಕಾರ್ಯಕ್ರಮಗಳ ಮೂಲಕ ದೇಶದ ಜನತೆಗೆ ಉತ್ತಮ ಕಾಣಿಕೆಯನ್ನು ನೀಡಿದ್ಧಾರೆ. ಮೋದಿಯವರ ಕೊಡುಗೆಯ ಬಗ್ಗೆ ವಿರೋಧಿಗಳು ಸಹ ಅಸೂಯೆ ಪಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿಯವರನ್ನು ಈ ರಾಷ್ಟ್ರದ ಪ್ರಧಾನ ಮಂತ್ರಿಯನ್ನಾಗಿ ಕಾಣುವ ಕನಸನ್ನು ನನಸಾಗಿಯೋಣವೆಂದರು.
ಕಾರ್ಯಕ್ರಮದಲ್ಲಿ ನಗರ ಘಟಕದ ಹಿರಿಯ ಮುಖಂಡ ಡಿ.ಎಂ.ಟಿ.ತಿಪ್ಪೇಸ್ವಾಮಿ, ಎಲ್‍ಐಸಿ ಗಂಗಾಧರ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಕರೀಕೆರೆ ತಿಪ್ಪೇಸ್ವಾಮಿ, ವಕ್ತಾರ ದಿನೇಶ್‍ರೆಡ್ಡಿ, ಯುವ ಘಟಕದ ಅಧ್ಯಕ್ಷ ಆರ್.ನಾಗೇಶ್, ಸ್ಲಂ ಮೋರ್ಚಾ ಕಾರ್ಯದರ್ಶಿ ಈಶ್ವರನಾಯಕ, ಮಹಿಳಾ ಘಟಕದ ಅಧ್ಯಕ್ಷೆ ಇಂದುಮತಿ ಜಗದೀಶ್, ಸುಭದ್ರಮ್ಮ, ಗಿರಿಜಾ ಮುಂತಾದವರು ಉಪಸ್ಥಿತರಿದ್ದರು.