ಬೆಂಗಳೂರು
ಕುವೆಂಪು ಭಾಷಾ ಭಾರತಿ ಪ್ರಾಧಿಕಾರಕ್ಕೆ ಪ್ರಸಕ್ತ ಸಾಲಿನಲ್ಲಿ ನೀಡುವ ಅನುದಾನವನ್ನು ಅರ್ಧದಷ್ಟು ಕಡಿತಗೊಳಿಸಲಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಕೆ.ಮರುಳಸಿದ್ದಪ್ಪ ಅವರು ಅಸಮಾಧಾನ ವ್ಯಕ್ತಪಡಿಸಿದರು.ಕನ್ನಡ ಸಂಸ್ಕೃತಿ ಇಲಾಖೆ ವ್ಯಾಪ್ತಿಯ ಬೇರೆ ಪ್ರಾಧಿಕಾರಕ್ಕೆ 1 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಆದರೆ ನಮ್ಮ ಪ್ರಾಧಿಕಾರಕ್ಕೆ ಮಾತ್ರ ಕೇವಲ 50 ಲಕ್ಷ ರೂಗಳನ್ನು ನೀಡಲಾಗಿದ್ದು ಇದರಿಂದ ಪ್ರಾಧಿಕಾರವು ರಾಜ್ಯ ವ್ಯಾಪ್ತಿ ಚಟುವಟಿಕೆಗಳನ್ನು ನಡೆಸಲು ಸಾಧ್ಯವೇ ಎಂದು ಪ್ರಶ್ನಿಸಿದರು.
ನಗರದ ಕನ್ನಡ ಭವನದ ನಯನದಲ್ಲಿ ಶುಕ್ರವಾರ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಆಯೋಜಿಸಿದ್ದ,2018ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಮತ್ತು 2018ನೇ ಸಾಲಿನ ಬಹುಮಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಜ್ಞಾನಭಾರತಿಯ ಕಲಾ ಗ್ರಾಮದಲ್ಲಿ ಕುವೆಂಪು ಭಾಷಾ ಪ್ರಾಧಿಕಾರಕ್ಕೆ ಮೀಸಲಾಗಿದ್ದ,ಜಾಗವನ್ನು ಕಿತ್ತುಕೊಂಡು ಶಿಲ್ಪಕಲಾಶಾಲೆಗೆ ಹಾಗೂ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾಗೆ(ರಾಷ್ಟ್ರೀಯ ನಾಟಕ ಶಾಲೆ) ಹಂಚಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡದಿಂದ ಸೇರಿದಂತೆ ಇತರೆ ಭಾಷೆಗಳಿಗೆ ಅನುವಾದಗೊಂಡಿರುವ ಶ್ರೇಷ್ಟ ಕೃತಿಗಳು ಮಾರಾಟವಾಗುತ್ತಿಲ್ಲ. ಹೀಗಾಗಿ, ಈ ಪುಸ್ತಕಗಳನ್ನು ಸಾಮಾಜಿಕ ಜಾಲ ತಾಣಗಳ ಮೂಲಕ ಉಚಿತವಾಗಿ ಸಿಗುವಂತೆ ಹೊಸದಾಗಿ ಯೋಜನೆ ಯೊಂದನ್ನು ಮಾಡಲಾಗುದು ಎಂದು ಮರುಳಸಿದ್ದಪ್ಪ ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ, ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶ ಎಚ್.ಎನ್ .ನಾಗಮೋಹನ್ ದಾಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಕೆ.ಎಂ.ಜಾನಕಿ, ಭಾಷಾ ಭಾರತಿ ಪ್ರಾಧಿಕಾರದ ರಿಜಿಸ್ಟರ್ ಈಶ್ವರ್ ಇನ್ನಿತರರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
