ಬೆಂಗಳೂರು
ಕೇಂದ್ರದಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯಕ್ಕೆ ಬರ ಪರಿಹಾರ ಅನುದಾನ ಬಿಡುಗಡೆಗೆ ಅನುಮೋದನೆ ಸಿಗಲಿದೆ ಎಂದು ಕೇಂದ್ರ ಕೃಷಿ ಸಚಿವಾಲಯದ ಮೂಲಗಳು ತಿಳಿಸಿವೆ.
ಈಗಾಗಲೇ ಕೇಂದ್ರ ಬರಪರಿಹಾರ ವೀಕ್ಷಕ ತಂಡ ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವಿಸೃತ ವರದಿಯನ್ನು ಕೃಷಿ ಸಚಿವಾಲಯಕ್ಕೆ ಸಲ್ಲಿಸಿದೆ. ರಾಜ್ಯ ಸರ್ಕಾರ 2 ಸಾವಿರದ 64 ಕೋಟಿ ರೂಪಾಯಿ ಹಿಂಗಾರು ಬೆಳೆ ಹಾನಿ ಪರಿಹಾರವನ್ನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ಬರಪರಿಹಾರ ವೀಕ್ಷಕ ತಂಡದ ವರದಿಯ ಆಧಾರದ ಮೇಲೆ ಗೃಹ ಸಚಿವಾಲಯದ ಅಧೀನದಲ್ಲಿರುವ ಉನ್ನತ ಮಟ್ಟದ ಸಮಿತಿ ಬರಪರಿಹಾರ ಅನುದಾನ ಕುರಿತು ನಿರ್ಧಾರ ಕೈಗೊಳ್ಳಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ