ಬೆಂಗಳೂರು
ಹೆಚ್ಚಿನ ಸಂಬಳದ ಕೆಲಸ ಕೊಡಿಸುವುದಾಗಿ 64 ವರ್ಷದ ಮಹಿಳೆಯನ್ನು ನಂಬಿಸಿ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ನಡೆಸಿದ ಇಬ್ಬರು ಆರೋಪಿಗಳನ್ನು ತಲಘಟ್ಟಪುರ ಪೊಲಿಸರು ಬಂಧಿಸಿದ್ದಾರೆ.
ಯಲಹಂಕದ ಪ್ರೇಮ್ ಹಾಗೂ ಬಿಮಲ್ ಬಂಧಿತ ಆರೋಪಿಗಳಾಗಿದ್ದಾರೆ ಸಂತ್ರಸ್ಥ ಮಹಿಳೆ ನೀಡಿದ್ದ ದೂರಿನ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಕೂಲಿ ಕಾರ್ಮಿಕರಾಗಿ ಕೆಲಸಮಾಡುತ್ತಿದ್ದ ಮಹಿಳೆಯನ್ನು ಹೆಚ್ಚು ಸಂಬಳ ಬರುವ ಕೆಲಸ ಕೊಡಿಸುವುದಾಗಿ ನಂಬಿಸಿ ಪರಿಚಯದವನೇ ಆದ ಆರೋಪಿ ಪ್ರೇಮ್, ಮಾ. 3ರಂದು ರಘುವನಹಳ್ಳಿಗೆ ಕರೆಸಿಕೊಂಡು ನಂತರ ಅಪಾರ್ಟ್‍ಮೆಂಟ್ ಸಮುಚ್ಚಯವೊಂದಕ್ಕೆ ಕರೆದೊಯ್ದು ಅಲ್ಲಿಯ ಸೆಕ್ಯೂರಿಟಿ ಗಾರ್ಡ್ ರಾಮ್ ಬಹದ್ದೂರ್ ಎಂಬಾತನ ಮನೆಯ ಕೊಠಡಿಯಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ.
ಅಲ್ಲದೇ ಇಂದು ಕೊಠಡಿಯಲ್ಲೇ ಇರು. ನಾಳೆ ಬಂದು ಕರೆದುಕೊಂಡು ಹೋಗಿ ಕೆಲಸ ಕೊಡಿಸುತ್ತೇನೆ’ ಎಂದು ಹೇಳಿ ಪ್ರೇಮ್ ಅಲ್ಲಿಂದ ಹೊರಟು ಹೋಗಿದ್ದ. ನಂತರ, ಅದೇ ಕೊಠಡಿಗೆ ಬಂದಿದ್ದ ಕಾರ್ಮಿಕ ಬಿಮಲ್ ಸಹ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ. ಅದರಿಂದ ನೊಂದ ಮಹಿಳೆ, ಮರುದಿನ ಪ್ರೇಮ್‍ಗೆ ಕರೆ ಮಾಡಿದ್ದರು. ಆತನ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ನಂತರ ಠಾಣೆಗೆ ಬಂದು ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
ಹಲವು ವರ್ಷಗಳಿಂದ ಪರಸ್ಪರ ಪರಿಚಯವಿದ್ದ ಆರೋಪಿಗಳು, ಮಹಿಳೆಗೆ ಕೆಲಸ ನೀಡುವುದಾಗಿ ಹೇಳಿ ಅತ್ಯಾಚಾರ ಎಸಗಿದ್ದಾರೆ. ಈ ಕುರಿತು ಆರೋಪಿಗಳು ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದು, ಇನ್ನೋರ್ವ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಆತನ ಬಂಧನಕ್ಕೆ ಪೊಲೀಸರು ಶೋಧ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
