ಬೆಂಗಳೂರು
ಕಾಲೇಜು ವಿದ್ಯಾರ್ಥಿಗಳು ಐಟಿಬಿಟಿ ಉದ್ಯೋಗಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಕೊತ್ತನೂರು ಪೊಲೀಸರು 1 ಕೆಜಿ 100 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಜಕ್ಕೂರಿನ ಮುರಳಿ (21), ಬಾಲಚಂದ್ರ (20), ವೆಂಕಟೇಶಪುರದ ದಿನೇಶ್ (19) ಬಂಧಿತ ಆರೋಪಿಗಳಾಗಿದ್ದಾರೆ ,ಬಂಧಿತರಿಂದ 32 ಸಾವಿರ ಮೌಲ್ಯದ 1 ಕೆಜಿ 100 ಗ್ರಾಂ ಗಾಂಜಾ ವಶಪಡಿಸಿಕೊಂಡು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ
ಆರೋಪಿಗಳು ಕೋಲಾರದಿಂದ ಗಾಂಜಾ ತಂದು ಚಿಕ್ಕ ಪಾಕೆಟ್‍ಗಳಾಗಿ ಕಟ್ಟಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ವೃತ್ತಿಪರ ಕಾಲೇಜುಗಳ ವಿದ್ಯಾರ್ಥಿಗಳು, ವಿದೇಶಿಯರು ಹಾಗೂ ಐಟಿ-ಬಿಟಿ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿರುವುದು ತನಿಖೆಯಲ್ಲಿ ಕಂಡು ಬಂದಿದೆ.
ಬಾಗಲೂರು ಮುಖ್ಯರಸ್ತೆಯ ಎವರ್ ಗ್ರೀನ್ ಲೇಔಟ್‍ನ ಗೌತಮ್ ಸ್ಕೂಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯಾಧರಿಸಿ ಕಾರ್ಯಾಚರಣೆ ನಡೆಸಿದ ಕೊತ್ತನೂರು ಇನ್ಸ್‍ಪೆಕ್ಟರ್ ಸುಬ್ರಮಣ್ಯಸ್ವಾಮಿ ಅವರು ಆರೋಪಿಗಳನ್ನು ಬಂಧಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಕಲಾಕೃಷ್ಣಸ್ವಾಮಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








