ಸಾರ್ವಜನಿಕ ಬೀಟ್ ಪದ್ದತಿ ಬಲಗೊಳಿಸಲು ಕ್ರಮ : ಎಸ್ಪಿ ಹನುಮಂತರಾಯ

ದಾವಣಗೆರೆ
      ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹನುಮಂತರಾಯ ಮಂಗಳವಾರ ಸಂಜೆ ಅಧಿಕಾರ ವಹಿಸಿಕೊಂಡರು .ಇಲ್ಲಿನ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ಎಸ್ಪಿ ಹನುಮಂತರಾಯ ಅವರನ್ನು ನಿರ್ಗಮಿತ ಎಸ್ಪಿ ಆರ್.ಚೇತನ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಬರಮಾಡಿಕೊಂಡು ಶುಭ ಹಾರೈಸಿದರು.
    ಇದೇ ವೇಳೆ ನೂತನ ಎಸ್ಪಿ ಹನುಮಂತರಾಯ ಸುದ್ದಿಗಾರರೊಂದಿಗೆ ಮಾತನಾಡಿ, ನಾಗರೀಕರು ಮತ್ತು ಪೊಲೀಸರ ನಡುವೆ ಬಾಂಧವ್ಯ ಬೆಸೆಯುವ ನಿಟ್ಟಿನಲ್ಲಿ ಸಾರ್ವಜನಿಕ ಬೀಟ್ ಪದ್ಧತಿಯನ್ನು ಮತ್ತಷ್ಟು ಬಲಪಡಿಸಲಾಗುವುದು. ದಾವಣಗೆರೆ ಜಿಲ್ಲೆಯು ವಿದ್ಯಾ ಕೇಂದ್ರವಾಗುವ ಜೊತೆಗೆ ಪ್ರತಿಷ್ಠಿತ ವಾಣಿಜ್ಯ ನಗರವೂ ಆಗಿದೆ. ಹಾಗಾಗಿ ಸಾರ್ವಜನಿಕರ ಸಮಸ್ಯೆ, ಇಲಾಖೆಗಳ ಆಂತರಿಕ ಸಮಸ್ಯೆಗಳ ಬಗ್ಗೆ ಸಹದ್ಯೋಗಿ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.
     ಮುಂಬರುವ ವಿಜಯ ದಶಮಿ ನಾಡ ಹಬ್ಬವಾಗಿದ್ದು, ಈ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಸೂಕ್ತ ಬಂದೋಬಸ್ತ್ ಮಾಡಲಾಗುವುದು. ಈ ಹಿಂದೆ ತೆಗೆದುಕೊಂಡಿರುವ ಕ್ರಮ ಹಾಗೂ ವಿಚಾರಗಳ ಕುರಿತು ಚರ್ಚಿಸಿ, ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಕಾನೂನು ಸುವ್ಯವಸ್ಥೆ, ಅಪರಾಧ ತಡೆಗೆ ಕ್ರಮ ಕೈಗೊಳ್ಳಲಾಗುವುದು
      ಎಲ್ಲಾ ಪೊಲೀಸ್ ಠಾಣೆಗಳ ಸಿಬ್ಬಂದಿಗೆ ಅಪರಾಧ ನಿಯಂತ್ರಣದ ವಿಶೇಷ ತರಬೇತಿ ನೀಡಲಾಗುವುದು. ಸಾರ್ವಜನಿಕರ ಹಿತದೃಷ್ಟಿಯಿಂದ ಪಬ್ಲಿಕ್ ಸೇಪ್ಟಿ ಕಾಯ್ದೆಯಂತೆ ಪ್ರಮುಖ ಸ್ಥಳಗಳಲ್ಲಿ ಸಿಸಿ ಟಿವಿ ಕ್ಯಾಮರಾ ಅಳವಡಿಸಲಿದ್ದು, ಇದರಿಂದ ಕಾನೂನು ಸುವ್ಯವಸ್ಥೆ ಹಾಗೂ ಸಂಚಾರ ನಿಯಮಗಳ ಪಾಲನೆಗೆ ಅನುಕೂಲವಾಗಲಿದೆ ಎಂದು ಅವರು ನುಡಿದರು. 
      ಈ ಹಿಂದೆ ಜಿಲ್ಲೆಯ ಹರಪನಹಳ್ಳಿ ಉಪ ವಿಭಾಗ ಹಾಗೂ ಮಂಗಳೂರು ನಗರ ಆಯುಕ್ತರ ಕಚೇರಿಯಲ್ಲಿ ಕಾರ್ಯ ನಿರ್ವಹಿಸಿರುವ ಅನುಭವ ನಮ್ಮ ನೆರವಿಗೆ ಬರಲಿದೆ. ಯಾವುದೇ ರೌಡಿ ಚಟುವಟಿಕೆ, ಸಮಾಜ ಘಾತುಕ ಚಟುವಟಿಕೆಗಳು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದರು. 
   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link